ಬೆಂಗಳೂರು: ರಾಜ್ಯ ಪಕ್ಷದ ಉಸ್ತುವಾರಿಯಾಗಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಇಂದು ಸಂಜೆ ನಡೆಯಲಿರುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಬೆಳಿಗ್ಗೆ 11 ಗಂಟೆ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಸುರ್ಜೇವಾಲಾ ಅವರನ್ನು ಪಕ್ಷದ ಹಲವು ಮುಖಂಡರು ಕಾರ್ಯಕರ್ತರು ಸ್ವಾಗತಿಸಿದ್ದಾರೆ.
ಸಂಜೆ ನಡೆಯುವ ಸಭೆಯಲ್ಲಿ ಸುರ್ಜೇವಾಲಾ ಅವರು ರಾಜ್ಯದಲ್ಲಿ ಇತ್ತೀಚೆಗೆ ಹಲವು ದಿನಗಳಿಂದ ನಡಯುತ್ತಿರುವ ರಾಜಕೀಯ ವಿದ್ಯಾಮಾನಗಳು, ಪಕ್ಷದಲ್ಲಿನ ಗೊಂದಲಗಳು ಸೇರಿದಂತೆ ಬಹುತೇಕ ವಿಷಯಗಳ ಬಗ್ಗೆ ಶಾಸಕರೊಂದಿಗೆ ಮುಕ್ತ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.