ಯಲಹಂಕ: ಇಂದಿನ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಮಾನವೀಯ ಮೌಲ್ಯ, ಸಹಾಯ, ತಾಂತ್ರಿಕತೆ,ತಂತ್ರಜ್ಞಾನ, ವ್ಯವಸಾಯ, ದಂತಹ ಕ್ಷೇತ್ರಗಳ ಬಗ್ಗೆ ಮಾರ್ಗದರ್ಶನ ಅವಶ್ಯಕತೆ ಇದೆ ಎಂದು ಹುಸ್ಕೂರು ಗ್ರಾ ಪಂ ವತಿಯಿಂದ ಆಯೋಜಿಸಿದ್ದ ವಿಶೇಷ ಮಕ್ಕಳ ಗ್ರಾಮಸಭೆಯನ್ನು ಉದ್ಘಾಟಿಸಿ ಅಧ್ಯಕ್ಷ ಡಾಕ್ಟರ್ ಬಿ ರಮೇಶ್ ಮಾತನಾಡಿದರು.
ಸೋಮವಾರ ನಡೆದ ವಿಶೇಷ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ಭಾಷಣ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತ, ಚೇರ್, ಡಸ್ಕ್, ಕಂಪ್ಯೂಟರ್,ಸ್ಮಾರ್ಟ್ ಟಿವಿ, ಪ್ರಿಂಟರ್, ಲಾಕರ್ಗಳನ್ನ ವಿತರಿಸಿದ್ದು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಅಧ್ಯಕ್ಷ ಡಾ. ಬಿ ರಮೇಶ್ ವಿತರಿಸಿದರು.
ಬಳಿಕ ಮಾತನಾಡಿದ ಶಿಕ್ಷಕರು ಇಂತಹ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಿಕ್ಕಿರುವುದು ನಮ್ಮ ಸರ್ಕಾರಿ ಶಾಲೆಗಳ ಮಕ್ಕಳ ಭಾಗ್ಯವೇ ಸರಿ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಸರಿಸಮವಾಗಿ ನಿಲ್ಲಬೇಕೆಂಬ ಹಿತದೃಷ್ಟಿಯಿಂದ ಇಷ್ಟೆಲ್ಲ ಸೌಲಭ್ಯಗಳನ್ನು ನೀಡುತ್ತಿರುವ ಹುಸ್ಕೂರು ಗ್ರಾಮ ಪಂಚಾಯಿತಿ ಹಾಗೂ ಅಧ್ಯಕ್ಷ ಬಿ ರಮೇಶ್ ರವರಿಗೆ ಧನ್ಯವಾದಗಳು ಎಂದರು.
ಕಾರ್ಯಕ್ರಮದಲ್ಲಿ ಹುಸ್ಕೂರು ಗ್ರಾಪಂ ಅಧ್ಯಕ್ಷ ಡಾ. ಬಿ ರಮೇಶ್, ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು, ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಎಸ್ ಡಿ ಎಂ ಸಿ ಅಧ್ಯಕ್ಷರು ಸದಸ್ಯರು, ಅಗಸ್ತ್ಯ ಇಂಟರ್ನ್ಯಾಷನಲ್ ಫೌಂಡೇಶನ್, ಬಾಸ್ಕೋ ಐ ಯಾಮ್ ಸೇವಾ ಸಂಘದವರ ಸೇರಿದಂತೆ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.