ಬೆಂಗಳೂರು: ಸ್ಕಂದ ಸ್ಪೆಷಾಲಿಟಿ ಕ್ಲಿನಿಕ್ ಮತ್ತು ವಿಜಯ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ.ರಾಜಕುಮಾರ್ ವಾರ್ಡಿನ ಅಗ್ರಹಾರ ದಾಸರಹಳ್ಳಿಯ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಆಯೋಜಿಸಿದ್ದರು.
ವಿಜಯ್ ಫೌಂಡೇಶನ್ನ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಇಂದಿನ ದಿನಗಳಲ್ಲಿ ಜನಸಾಮಾನ್ಯರಿಗೆ ಅರೋಗ್ಯವೇ ಮಹಾ ಭಾಗ್ಯ ಎನ್ನುವಂತಾಗಿದೆ, ಬಡಜನರು ತಮ್ಮ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಹಣಕಾಸು ತೊಂದರೆಗಳಿಂದಾಗಿ ದೊಡ್ಡ ಆಸ್ಪತ್ರೆಗಳಿಗೆ ಹೋಗಲು ಸಾಧ್ಯವಾಗದೆ ಸಾವು ನೋವುಗಳನ್ನು ಅನುಭವಿಸುತ್ತಿದ್ದಾರೆ, ಜನರು ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸ್ಕಂದ ಸ್ಪೆಷಾಲಿಟಿ ಕ್ಲಿನಿಕ್ ಮತ್ತು ವಿಜಯ್ ಫೌಂಡೇಷನ್ ತಜ್ಞ ವೈದ್ಯರನ್ನು ಕರೆಸಿ ಈ ಭಾಗದ ಜನರಿಗೆ ಸಹಾಯವಾಗುವಂತೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಆರೋಗ್ಯ ತಪಾಸಣೆ, ಇಸಿಜಿ, ಕಣ್ಣು, ಕಿವಿ ಪರೀಕ್ಷೆ, ದಂತ ಪರೀಕ್ಷೆ ಮತ್ತಿತರ ಆರೋಗ್ಯ ಪರೀಕ್ಷೆಗಳಿಗೆ ವ್ಯವಸ್ಥೆ ಮಾಡಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಸಿರೇ ನಮ್ಮುಸಿರು ಪ್ರತಿಷ್ಠಾನದ ರಾಜ್ಯಾಧ್ಯಕ್ಷ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಐಎನ್ ಟಿಯುಸಿ ಮತ್ತು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ರ. ನರಸಿಂಹಮೂರ್ತಿ ಮಾತನಾಡಿ,
ಇಂದಿನ ದಿನಗಳಲ್ಲಿ ಜನ ಸಾಮಾನ್ಯರಿಗೆ ಅರೋಗ್ಯವೇ ಮಹಾ ಭಾಗ್ಯ ಎನ್ನುವಂತಾಗಿದೆ, ಬಡಜನರು ತಮ್ಮ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಹಣಕಾಸು ತೊಂದರೆಗಳಿಂದಾಗಿ ದೊಡ್ಡ ಆಸ್ಪತ್ರೆಗಳಿಗೆ ಹೋಗಲು ಸಾಧ್ಯವಾಗದೆ ಸಾವು ನೋವುಗಳನ್ನು ಅನುಭವಿಸುತ್ತಿದ್ದಾರೆ, ಇಂತಹ ಸಂಧರ್ಭದಲ್ಲಿ, ವಿಜಯ್ ಫೌಂಡೇಷನ್ ಮತ್ತು ಸ್ಕಂದ ಸ್ಪೆಷಾಲಿಟಿ ಕ್ಲಿನಿಕ್ ರವರು ತಜ್ಞ ವೈದ್ಯರನ್ನು ಕರೆಸಿ ಸ್ಥಳೀಯವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ, ಜನರ ಆರೋಗ್ಯವನ್ನು ಕಾಪಾಡುವ ಕೆಲಸ ನಿಜಕ್ಕೂ ಅತ್ಯಂತ ಶ್ಲಾಘನೀಯ ಕೆಲಸ ಎಂದು ಪ್ರಶಂಸಿದ ಅವರು ಇಂತಹ ಅರೋಗ್ಯ ಶಿಬಿರದಥ ಪ್ರಯೋಜನವನ್ನು ಪಡೆದು ಕೊಳ್ಳಬೇಕೆಂದು ತಿಳಿಸಿದರು.
ಮಹಾಗಣಪತಿ ನಗರದ ಸ್ಕಂದ ಸ್ಪೆಷಾಲಿಟಿ ಕ್ಲಿನಿಕ್ ವೈದ್ಯರಾದ ಡಾ.ದೀಪಕ್, ಡಾ.ದಿವ್ಯ, ಡಾ.ಸ್ವಾತಿ ಮತ್ತಿತರರು ಮುಖ್ಯ ವೈದ್ಯರು ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿದರು, ನೂರಾರು ಸ್ಥಳೀಯ ನಾಗರಿಕರು ಇದರ ಸದುಪಯೋಗ ಪಡೆದುಕೊಂಡರು. ಈ ವೇಳೆ ವಿಜಯ್ ಫೌಂಡೇಷನ್ ನ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ನೆರವಾದರು.