ರಾಮನಗರ: ವೈಕುಂಠ ಏಕಾದಶಿ ದಿನದಂದೆ ಗ್ರಾಮಸ್ಥರಿಂದ ದೇವಾಲಯಕ್ಕೆ ದಿಗ್ಬಂದನ ಹಾಕಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.ರಾಮನಗರ ತಾಲ್ಲೂಕು ಬಿಡದಿ ಹೋಬಳಿ ಮಂಚನಾಯ್ಕನಹಳ್ಳಿ ಸಮೀಪದ ಹನುಮಂತನಗರದ ಬೆಂಗಳೂರು- ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಗೆ ಹೊಂದಿಕೊಂಡಿರುವ ಶ್ರೀ ಕೋತಿ ಆಂಜನೇಯಸ್ವಾಮಿ ದೇವಾಲಯ ಮಾತ್ರ ತನ್ನದೇ ಆದ ವೈಶಿಷ್ಟ್ಯತೆಯಿಂದ ಹೆಸರು ಮಾಡಿದೆ, ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಭಕ್ತದಿಗಳು ಬಂದು ಹೋಗುತ್ತಾರೆ,
ಆದರೆ ಇಲ್ಲಿ ಹೆಚ್ಚು ಅಪಘಾತಕ್ಕೆ ಸಾರ್ವಜನಿಕರು ಒಳಗಾಗುತ್ತಿದ್ದಾರೆ, ಗುರುವಾರ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ ರಸ್ತೆ ದಾಟುತ್ತಿದ್ದ ಮಹಿಳೆ ಅಪಘಾತಕ್ಕಿದಾಗಿ ಸಾವನ್ನಪ್ಪಿದ್ದಾರೆ , ಇದರಿಂದ ಆಕ್ರೋಶ ಗೊಂಡ ಅಕ್ಕ ಪಕ್ಕದ ಗ್ರಾಮಸ್ಥರು ಓಡಾಡಲು ಸ್ಕೈ ವಾಕ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಆಡಳಿತ ಮಂಡಳಿ ವಿರುದ್ಧ ಗ್ರಾಮಸ್ಥರು ಸ್ಕೈ ವಾಕ್ ನಿರ್ಮಾಣಕ್ಕೆ ಒತ್ತಾಯಿಸಿ ಕೋತಿ ಆಂಜನೇಯ ದೇವಾಲಯಕ್ಕೆ ಬೀಗ ಜಡಿದಿದ್ದಾರಲ್ಲದೆ ಸರ್ವಿಸ್ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು,
ಈ ಘಟನೆಯಿಂದಾಗಿ ಸರ್ವಿಸ್ ರಸ್ತೆಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು poಲೀಸರು ಮದ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನು ಮನ ಒಲಿಸಿ ರಸ್ತೆ ಸಂಚಾರ ಸುಗಮ ಗೊಳಿಸಿದರು.ದೇಗುಲದ ಮುಂದೆ ಪ್ರತಿಭಟನೆ ಮುಂದುವರಿಸಿದ ಗ್ರಾಮಸ್ಥರು ತಿಮ್ಮೇಗೌಡ, ಅಂಜನಪ್ಪ, ಹಾಗೂ ಆಡಳಿತ ಮಂಡಳಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ಬ್ಯಾಟಪ್ಪ, ಯೋಗಾನಂದ್ ಸೇರಿದಂತೆ ಗ್ರಾಮಸ್ಥರು ಸ್ಥಳೀಯರು ಇದ್ದರು.