ಬೆಂಗಳೂರು: ಮುಡಾ ಹಗರಣದಲ್ಲಿ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಸ್ಪಕ್ಷಪಾತ ತನಿಖೆಗೆಅನುವು ಮಾಡಿಕೊಡಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ ಮುಖ್ಯಮಂತ್ರಿಯವರು ಹಗರಣದಲ್ಲಿ ಎ೧ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಈ ಪ್ರಕರಣದಲ್ಲಿ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲುವಾದಿ ನಾರಾಯಣಸ್ವಾಮಿ ಮಾತನಾಡಿ, ವಿಚಾರಣೆಯಲ್ಲಿ ಮುಖ್ಯಮಂತ್ರಿಯವರು ತಮ್ಮ ಕೈವಾಡ ಎಸಗುವ ಸಾಧ್ಯತೆಯಿದೆ. ಹಾಗಾಗಿ ವಿಚಾರಣೆ ವೇಲೆ ಅವರು ಅಧಿಕಾರದಲ್ಲಿರುವ ಸರಿಯಲ್ಲ. ಎಂದಿದ್ದಾರೆ.