ಬೆಂಗಳೂರು: ಸ್ನೇಹದೀಪ ಅಂಗವಿಕಲರ ಸಂಸ್ಥೆಯ ಎರಡು ದಿನಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಸ್ನೇಹದೀಪ ಅಂಗವಿಕಲರ ಸಂಸ್ಥೆಯ ಡಾ.ಪಾಲ್ ಮುದ್ದಾ ಅವರು ವಿಶೇಷ ಚೇತನರಿಗಾಗಿ ಇಂತಹ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ, ರಾಜ್ಯ ಸರ್ಕಾರ ವಿಶೇಷ ಚೇತನರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿ ತಂದಿದೆ ಅವರಿಗಾಗಿ ಇನ್ನು ಹೆಚ್ಚಿನ ಯೋಜನೆಗಳನ್ನು ಜಾರಿ ತರಲಾಗುವುದು ಎಂದು ತಿಳಿಸಿದರು.
ವಿಶೇಷ ಚೇತನ ಮಕ್ಕಳು,ಯುವಕರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಚಲನ ಚಿತ್ರಗಳ ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ಟ್ರೀ ಲೈಫ್ ಆಸ್ಪತ್ರೆಯ ನಿರ್ದೇಶಕರಾದ ಡಾ.ಶಫೀಕ್ ಎ.ಎಮ್. ಸಂಸ್ಥೆಯ ಹಿತೈಷಿಗಳಾದ ಶಾಮಲಾ, ಸ್ನೇಹ ದೀಪ ಸಂಸ್ಥೆಯ ಧರ್ಮದರ್ಶಿ ಕೆ.ಜಿ.ಮೋಹನ್ ಮತ್ತಿತರರು ಭಾಗವಹಿಸಿದ್ದರು.