ಹೊಸದಿಲ್ಲಿ : ಪುರುಷರ 50 ಮೀ. ರೈಫಲ್ 3 ಪೊಸಿಶನ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ ಭಾರತದ ಮೊದಲ ಶೂಟರ್ ಎನಿಸಿಕೊಂಡು ಇತಿಹಾಸ ನಿರ್ಮಿಸಿರುವ ಸ್ವಪ್ನಿಲ್ ಕುಸಾಲೆ ಸಾಧನೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ವಿಜೇತ ಸ್ವಪ್ನಿಲ್ ಕುಸಾಲೆಗೆ ಹೃತ್ಪೂರ್ವಕ ಅಭಿನಂದನೆಗಳು. ಪುರುಷರ 50 ಮೀ. ರೈಫಲ್ 3 ಪೊಸಿಶನ್ಸ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯನಾಗಿದ್ದಾರೆ.
ಒಂದೇ ಒಲಿಂಪಿಕ್ ಗೇಮ್ಸ್ನಲ್ಲಿ ಭಾರತವು ಮೊದಲ ಬಾರಿ ಶೂಟಿಂಗ್ ಸ್ಪರ್ಧೆಗಳಲ್ಲಿ ಮೂರು ಪದಕಗಳನ್ನು ಜಯಿಸಿದೆ. ಇಡೀ ಶೂಟಿಂಗ್ ತಂಡವು ಭಾರತಕ್ಕೆ ಹೆಮ್ಮೆ ತಂದಿದೆ. ಮುಂಬರುವ ಸ್ಪರ್ಧೆಗಳಿಗೆ ನಮ್ಮ ಎಲ್ಲ ಆಟಗಾರರಿಗೆ ನಾನು ಶುಭ ಹಾರೈಸುವೆ ಎಂದು ರಾಷ್ಟ್ರಪತಿ ಮುರ್ಮು ಟ್ವೀಟಿಸಿದ್ದಾರೆ.