ಬೆಂಗಳೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಮಾಡಿರುವ ಭಯಾನಕ ಘಟನೆ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯತಿ ಸದಸ್ಯ ಅಪಾಕ್ ಅಮಿರ್ ಖಾನ್ (45)ನನ್ನು ಲಾಂಗು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕಳೆದ ರಾತ್ರಿ ಘಟನೆ ನಡೆದಿದ್ದು ಇದೇ ಗ್ರಾಮದ ಮೆಹಬೂಬ್ ಎಂಬಾತ ಕೊಚ್ಚಿ ಕೊಲೆ ಮಾಡಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗಿದೆ.
ಅಮಿರ್ ಖಾನ್ ಗ್ರಾಮ ಪಂಚಾಯತಿ ಮುಂದೆ ಫೋನ್ನಲ್ಲಿ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ದಾಳಿ ಮಾಡಿ ಕೊಲೆ ಮಾಡಲಾಗಿದೆ. ಕೊಲೆ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.