ಬೆಂಗಳೂರು: ಹಳೆ ಹುಬ್ಬಳ್ಳಿ ಗಲಭೆಗೆ ಸಂಬಂಧಪಟ್ಟಂತೆ ದಾಖಲಾಗಿದ್ದ ಪ್ರಕರಣಗಳನ್ನು ರಾಜ್ಯಸರ್ಕಾರ ಹಿಂದಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಇದನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆಗೆ ನಡೆದಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಮಂಡಲದ ಉಭಯ ಸದನಗಳ ವಿಪಕ್ಷ ನಾಯಕರಾದ ಆರ್. ಅಶೋಕ್,, ಚಲುವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥ್ನಾರಾಯಣ, ಕೆ.ಗೋಪಾಲಯ್ಯ, ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಮುಖಂಡರು ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.