ಚಾಂಪಿಯನ್ಸ್ ಟ್ರೋಫಿಯಲ್ಲಿ ಅಭಿಯಾನ ಆರಂಭಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಇಂದು ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಎದುರಾಳಿ ಬಾಂಗ್ಲಾದೇಶ್. ಫೆಬ್ರವರಿ 23 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಭಾರತ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಬೇಕಿದ್ದು, ಅದಕ್ಕಾಗಿ ಮೊದಲ ಪಂದ್ಯದಲ್ಲೇ ಆಲ್?ರೌಂಡರ್?ಗಳಿಗೆ ಮಣೆ ಹಾಕುವ ಸಾಧ್ಯತೆ ಹೆಚ್ಚಿದೆ.
ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಗೆ ಚಾಲನೆ ದೊರೆತಿದೆ. ನಿನ್ನೆ ನಡೆದ (ಫೆ.19) ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ನ್ಯೂಝಿಲೆಂಡ್ ಶುಭಾರಂಭ ಮಾಡಿದೆ. ಇದೀಗ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವಾಡಲು ಸಜ್ಜಾಗಿದೆ. ಇಂದು (ಫೆ.20) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 2ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್? ಹೇಗಿರಲಿದೆ ಎಂಬುದೇ ಕುತೂಹಲ. ಏಕೆಂದರೆ ಈ ಮ್ಯಾಚ್ ಬಳಿಕ ಭಾರತ ತಂಡವು ಬದ್ಧವೈರಿ ಪಾಕಿಸ್ತಾನ್ ತಂಡವನ್ನು ಎದುರಿಸಬೇಕಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದವೇ ಸಮತೋಲಿತ ಪ್ಲೇಯಿಂಗ್ ಇಲೆವೆನ್ ರೂಪಿಸಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ. ಅದರಂತೆ ಮೊದಲ ಪಂದ್ಯದಲ್ಲಿ ಭಾರತ ತಂಡವು 5+3+3 ಯೋಜನೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ.ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.