ಬೆಂಗಳೂರು: ಹೆಚ್ಚುತ್ತಿರುವ ತಾಪಮಾನದ ದೃಷ್ಟಿಯಿಂದ ಮುಂಬರುವ ದಿನಗಳಲ್ಲಿ ಕನಿಷ್ಠ ಶೇ.5ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಾಗಲಿದೆ ಎಂದು ಇಂಧನ ಇಲಾಖೆ ಮುನ್ಸೂಚನೆ ನೀಡಿದೆ.
2025 ರ ಮೊದಲ ಆರು ತಿಂಗಳಲ್ಲಿ ಬೇಡಿಕೆಯು ದಿನಕ್ಕೆ ಕನಿಷ್ಠ 340 ಮಿಲಿಯನ್ ಯುನಿಟ್ಗಳಿಗೆ ಏರುತ್ತದೆ ಎಂದು ಇಲಾಖೆಯ ತಂಡವು ಮುನ್ಸೂಚನೆ ನೀಡಿದೆ.
ಕಳೆದ ವರ್ಷ, ಉತ್ತಮ ಮುಂಗಾರು ಮಳೆಯಿಂದಾಗಿ ಬೇಡಿಕೆ ಕಡಿಮೆಯಾಗಿತ್ತು, 2023-24ರಲ್ಲಿ ನಾವು 17,220 ಮೆಗಾವ್ಯಾಟ್ನ ಗರಿಷ್ಠ ಬೇಡಿಕೆಯನ್ನು ಕಂಡಿದ್ದೇವೆ. ಈ ವರ್ಷ, ಮೊದಲ ಆರು ತಿಂಗಳಲ್ಲಿ ಇದು 18,000 ಮೆಗ ವ್ಯಾಟ್ ಗೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಈ ಕುರಿತು ಶುಕ್ರವಾರ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರೊಂದಿಗೆ ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾಯಿತು. ಇಲಾಖೆಯು ಈ ವರ್ಷ ಜಲವಿದ್ಯುತ್ ಕೇಂದ್ರಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ ಎಂದು ಅಧಿಕಾರಿ ಹೇಳಿದರು.
ಕರ್ನಾಟಕವು ಇತರ ರಾಜ್ಯಗಳೊಂದಿಗೆ ಮಾಡಿಕೊಂಡಿರುವ ವಿದ್ಯುತ್ ಖರೀದಿ ಒಪ್ಪಂದಗಳನ್ನು ಸಹ ಬಳಸಿಕೊಳ್ಳಲಾಗುವುದು. ಅವುಗಳನ್ನು ಮೊದಲು ಬೇಸಿಗೆಯ ಆರಂಭಿಕ ದಿನಗಳಲ್ಲಿ ಬಳಸಲಾಗುತ್ತದೆ. ಸೋಲಾರ್ ಆಧಾರಿತ ನೀರಾವರಿ ಪಂಪ್ಸೆಟ್ಗಳನ್ನು ಅಳವಡಿಸಲು ನಾವು ರೈತರಿಗೆ ಮನವಿ ಮಾಡಿದ್ದೇವೆ ಇದರಿಂದ ಗ್ರಿಡ್ನಲ್ಲಿನ ಲೋಡ್ ಅನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತದೆ ಎಂದು ಅಧಿಕಾರಿ ಹೇಳಿದರು.
ಜಾರ್ಜ್ ಅವರು ಕೆಪಿಸಿಎಲ್, ಕೆಪಿಟಿಸಿಎಲ್ ಮತ್ತು ಪಿಸಿಕೆಎಲ್ ಅಧಿಕಾರಿಗಳೊಂದಿಗೆ ವಿವರವಾದ ಸಭೆ ನಡೆಸಿದರು. ಸಭೆಯಲ್ಲಿ ವಿದ್ಯುತ್ ಉತ್ಪಾದನೆ, ಸಂಗ್ರಹಣೆ ಮತ್ತು ಪ್ರಸರಣ ಕುರಿತು ಗಮನಹರಿಸಲಾಯಿತು. ಬೇಡಿಕೆ ಮತ್ತು ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಸಾಕಷ್ಟು ವಿದ್ಯುತ್ ಉತ್ಪಾದನೆಗೆ ಒತ್ತು ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳ ಸಂಗ್ರಹದ ಬಗ್ಗೆ ಮಾಹಿತಿ ತೆಗೆದುಕೊಂಡ ಜಾರ್ಜ್ ಅವರು ಕಳೆದ ಬೇಸಿಗೆಯಲ್ಲಿ 3,600 ಮೆಗಾವ್ಯಾಟ್ ಉತ್ಪಾದಿಸುವ ಮೂಲಕ ದಾಖಲೆಯನ್ನು ಸೃಷ್ಟಿಸಿತು. ಈ ದಾಖಲೆ ಮುರಿಯಲು ಅಧಿಕಾರಿಗಳು ಪಣ ತೊಡಬೇಕು ಎಂದು ತಿಳಿಸಿದರು. ರಾಯಚೂರು, ಯರಮರಸ್ ಮತ್ತು ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಸ್ಥಗಿತಗೊಂಡಿರುವ ಘಟಕಗಳನ್ನು ಫೆಬ್ರವರಿಯೊಳಗೆ ನಿರ್ವಹಣೆ ಕಾರ್ಯದ ನಂತರ ಪುನರಾರಂಭಿಸಬೇಕು ಎಂದು ತಿಳಿಸಿದ್ದಾರೆ.
ಇಂಧನ ವಿನಿಮಯ ಒಪ್ಪಂದಗಳಿಗೆ ಇತರೆ ರಾಜ್ಯಗಳೊಂದಿಗೆ ಮಾತುಕತೆ ಆರಂಭಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. “ಅಲ್ಪಾವಧಿಯ ವಿದ್ಯುತ್ ಸಂಗ್ರಹಣೆಗೆ ಸಂಬಂಧಿಸಿದ ಹೆಚ್ಚಿನ ವೆಚ್ಚಗಳನ್ನು ಗಮನಿಸಿದರೆ, ಕಡಿಮೆ ದರದಲ್ಲಿ ದೀರ್ಘಾವಧಿಯ ಒಪ್ಪಂದಗಳನ್ನು ಪಡೆದುಕೊಳ್ಳಲು ಆದ್ಯತೆ ನೀಡಬೇಕು. ಈ ವಿಧಾನವು ಪೀಕ್ ಅವರ್ಗಳಲ್ಲಿ ಹೆಚ್ಚಿನ ದರದಲ್ಲಿ ಹೆಚ್ಚುವರಿ ವಿದ್ಯುತ್ ಅನ್ನು ಮಾರಾಟ ಮಾಡಲು ಅನುವು ಮಾಡಿಕೊಡುತ್ತದೆ, ಇದು ರಾಜ್ಯದ ಮೇಲೆ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ಜಾರ್ಜ್ ಹೇಳಿದರು.
ಕೃಷಿ ಪಂಪ್ಸೆಟ್ಗಳಿಗೆ ಹಗಲು ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಥರ್ಮಲ್ ಮತ್ತು ಹೈಡಲ್ ಸ್ಥಾವರಗಳು ರಾತ್ರಿ ಬಳಕೆಗೆ ವಿದ್ಯುತ್ ಉತ್ಪಾದಿಸುವತ್ತ ಗಮನಹರಿಸಬೇಕು ಎಂದು ಸೂಚಿಸಿದ್ದಾರೆ.