ಬೆಂಗಳೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರ್ನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದ ಕಾರ್ನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದಾರೆ.
ಕಂಟೇನರ್ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರೊಳಗಿದ್ದ ಎಲ್ಲಾ ಪ್ರಯಾಣಿಕರ ದೇಹಗಳು ಛಿದ್ರಛಿದ್ರವಾಗಿದೆ. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.ಈ ಭೀಕರ ಅಪಘಾತ ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗ್ರಾಮ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 1 ಕಿಲೋ ಮೀಟರ್ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.