ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪಬ್’ಗೆ ಹೋಗಿದ್ದ ಮಹಿಳೆಯೊಬ್ಬರಿಗೆ ಯುವಕನೊಬ್ಬ ಮದ್ಯ ಸೇವಿಸುವಂತೆ ಒತ್ತಾಯಿಸಿ, ಅನುಚಿತಾಗಿ ವರ್ತನೆ ತೋರಿದ ಹಿನ್ನೆಲೆಯಲ್ಲಿ ಈ ಸಂಬಂಧ ಮಹಿಳೆ ದೂರು ದಾಖಲಿಸಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಾರತ್ತಹಳ್ಳಿಯ ಪಬ್’ಗೆ ಮಹಿಳೆ ಮಂಗಳವಾರ ರಾತ್ರಿ ಗೆಳೆಯನೊಂದಿಗೆ ಭೇಟಿ ನೀಡಿದ್ದರು. ಈ ವೇಳೆ ಪಾನಮತ್ತನಾಗಿದ್ದ ಯುವಕ ಮಹಿಳೆ ಬಳಿ ಬಂದು ಮದ್ಯ ಸೇವಿಸುವಂತೆ ಒತ್ತಾಯಿಸಿ, ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ನಡುವೆ ಸ್ಥಳಕ್ಕೆ ಬಂದ ಬೌನ್ಸರ್ ಗಳು ಯುವಕನನ್ನು ಪಬ್ ನಿಂದ ಹೊರಗೆ ಕಳುಹಿಸಿದ್ದಾರೆ. ಆದರೆ, ಮಹಿಳೆ ಆತನನ್ನು ಪಬ್ ನಿಂದ ಹೊರಗೆ ಕಳುಹಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.
ಬುಧವಾರ ಬೆಳಗ್ಗೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಪಬ್ನಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದು, ತನಿಖೆಗಳು ಆರಂಭಿಸಿದ್ದಾರೆ