ಬೆಂಗಳೂರು: ಹೊಸ ವರ್ಷ ಆಚರಣೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವಗೃಹ ಸಚಿವ ಡಾ. ಜಿ. ಪರಮೇಶ್ವರ್, ಹೊಸ ವರ್ಷ ಆಚರಣೆ ಮಾಡುವವರುಎಚ್ಚರಿಕೆಯಿಂದ ಆಚರಿಸಿ ಈ ಹಿಂದೆ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಅವಘಡಗಳು ಸಂಭವಿಸಿವೆ. ಹಾಗೂ ಹೊಸ ವರ್ಷ ಆಚರಣೆ ಮಾಡುವವರು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ.
ಈಗಾಗಲೇ ಪೊಲೀಸರಿಗೆ ಈ ಬಗ್ಗೆ ಸುರಕ್ಷಾ ಕ್ರಮಗಳು ಕೈಗೊಳ್ಳಲು ಅಗತ್ಯ ಸೂಚನೆ ನೀಡಲಾಗುವುದು ಎಂದಿದ್ದಾರೆ.
ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಹೆಬ್ಬಾಳ್ಕರ್ ಹಾಗೂ ಶಾಸಕ ಸಿ.ಟಿ ರವಿ ನಡುವೆ ನಡೆದ ಪ್ರಕರಣದ ವಿಚಾರಣೆಗೆ ಸಂಬಂಧಪಟ್ಟಂತೆ ಪೊಲೀಸರಿಗೆ ಸಭಾಪತಿ ಹೊರಟ್ಟಿ ಅವರು, ಮಹಜರಿಗೆ ಅವಕಾಶ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಈಗಾಗಲೇ ಹೆಳಿದ್ದೇನೆ ಎಂದ ಅವರು, ಈ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ ಎಂದಿದ್ದಾರೆ.