ಬೆಂಗಳೂರು: ಬೆಂಗಳೂರು ನಗರದ ಜನತೆ ಹೊಸ ವರ್ಷ ಆಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲು ಪೊಲೀಸರು ಸುರಕ್ಷತಾ ಕ್ರಮವನ್ನು ಕೈಗೊಂಡಿರುತ್ತೇವೆ ಎಂದು ಪೊಲೀಸ್ ಆಯುಕ್ತ ದಯಾನಂದ್ ರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಅತಿ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯನ್ನಾಗಿ ಪರಿಗಣಿಸಿ ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ವ್ಯಾಪಕ ಬಂದೋಬಸ್ತ್ ಮಾಡಲಾಗುತ್ತದೆ ಎಂದು ತಿಳಿಸಿದರು.
ವಿಶೇಷವಾಗಿ ಕೇಂದ್ರ ವಿಭಾಗದ ಬ್ರಿಗೇಡ್ ರಸ್ತೆ ಮತ್ತು ಎಂಜಿ ರಸ್ತೆ, ಉಪೇರ ಜಂಕ್ಷನ್, ರಿಚ್ಮಂಡ್ ರಸ್ತೆ ರೆಸಿಡೆನ್ಸಿ ರಸ್ತೆ ವ್ಯಾಪ್ತಿಯಲ್ಲಿ ಐದು ಡಿಸಿಪಿ 18 ಎಸಿಪಿ 41 ಪೊಲೀಸ್ ಸೇರಿದಂತೆ ಒಟ್ಟು 252 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.ಇದಲ್ಲದೆ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಚೆಕ್ ಪೋಸ್ಟ್ಗಳನ್ನು ತೆರೆದಿದ್ದು ಮಕ್ಕಳು ಕಾಣೆಯದಲ್ಲಿ ಯಾವುದೇ ರೀತಿಯ ಕಳುವಿನ ದೂರುಗಳಿಗೆ ಅಥವಾ ಯಾವುದೇ ತುರ್ತುಸಂದರ್ಭಗಳಲ್ಲಿ ಅವಶ್ಯಕತೆ ಯನ್ನು ಪಡೆಯ ಬಹುದಾಗಿದೆ ಎಂದು ತಿಳಿಸಿದರು.
ಇದಲ್ಲದೆ ಪ್ರಮುಖ ಸ್ಥಳಗಳಲ್ಲಿ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿರುವ ಮಹಿಳಾ ಸುರಕ್ಷತಾ ಸ್ಥಳಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಡಿಸೆಂಬರ್ 31 ರಂದು ರಾತ್ರಿ 11,830 ಅಧಿಕಾರಿ ಮತ್ತು ಸಿಬ್ಬಂದಿಗಳು ವಿಶೇಷ ಕರ್ತವ್ಯದಲ್ಲಿ ಹಾಜರಾಗಿರುತ್ತಾರೆ ಎಂದು ತಿಳಿಸಿದರು. ಇದಲ್ಲದೆ ಕೆಎಸ್ಆರ್ಪಿ ಮತ್ತು ಸಿಎ ಆರ್ ತುಕುಡಿಗಳನ್ನು ಸಹ ನೇಮಿಸಲಾಗಿದೆ. ಎಲ್ಲಾ ಮೇಲ್ ಸೇತುವೆಗಳನ್ನು ರಾತ್ರಿ 11 ರಿಂದ ಬೆಳಿಗ್ಗೆ 4 ರ ತನಕ ಬಂದ್ ಮಾಡಲಾಗುವುದು ಎಂದು ತಿಳಿಸಿದರು.