ಭಾರತ ತಂಡ ಮಹಿಳಾ ಏಷ್ಯಾಕಪ್ ಟಿ೨೦ ಟೂರ್ನಿಯಲ್ಲಿ ನೇಪಾಳ ವಿರುದ್ಧ ೮೨ ರನ್ಗಳ ಗೆಲುವು ಸಾಧಿಸಿದೆ. ಈ ಮೂಲಕ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೆಮಿಫೈನಲ್ ಹಂತಕ್ಕೇರಿದೆ.
ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಆರಂಭಿಕ ಆಟಗಾರ್ತಿಯಾದ ದಯಾಳನ್ ಹೇಮಲತಾ(೪೭) ಮತ್ತು ಶಫಾಲಿ ವರ್ಮಾ ಅವರ ಬಿರುಸಿನ ಬ್ಯಾಟಿಂಗ್ ನೆರವಿನಿಂದ ನಿಗದಿತ ೨೦ ಓವರ್ಗಳಲ್ಲಿ ೩ ವಿಕೆಟ್ಗೆ ೧೭೮ ರನ್ ಪೇರಿಸಿತು.
ಗುರಿ ಬೆನ್ನಟ್ಟಿದ ನೇಪಾಳ ಆರಂಭದಲ್ಲೇ ಸತತವಾಗಿ ವಿಕೆಟ್ ಕಳೆದುಕೊಂಡು ಅಂತಿಮವಾಗಿ ೯ ವಿಕೆಟ್ಗೆ ೯೬ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಯುಎಇ ವಿರುದ್ಧ ಆರು ವಿಕೆಟ್ ಗೆಲುವಿನೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದ ನೇಪಾಳ ತಂಡ ಇಂದಿನ ಪಂದ್ಯದಲ್ಲಿ ಭಾರತ ವಿರುದ್ಧ ದೊಡ್ಡ ಅಂತರದ ಗೆಲುವು ಸಾಧಿಸುತ್ತಿದ್ದರೆ ಪಾಕಿಸ್ತಾನವನ್ನು ಹಿಂದಿಕ್ಕಿ ಸೆಮಿಫೈನಲ್ ಹಂತಕ್ಕೇರುವ ಅವಕಾಶವಿತ್ತು. ಆದರೆ ಸೋಲು ಕಂಡು ಈ ಅವಕಾಶದಿಂದ ವಂಚಿತವಾಯಿತು. ಭಾರತ ಪರ ಬೌಲಿಂಗ್ನಲ್ಲಿ ಅರುಂಧತಿ ರೆಡ್ಡಿ(೨), ದೀಪ್ತಿ ಶರ್ಮಾ(೩), ರಾಧಾ ಯಾದವ್(೨) ವಿಕೆಟ್ ಕಿತ್ತು ಮಿಂಚಿದರು