ಕೋಲಾರ ನಗರದ ಮಹಾತ್ಮ ಗಾಂಧಿ ರಸ್ತೆಯ ಗಾಂಧಿವನ ದಲ್ಲಿ ಜಿಲ್ಲಾಡಳಿತ ಮತ್ತು ಶ್ರೀ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ಏರ್ಪಡಿಸಿದ್ದ ೬೯ ನೇ ಕನ್ನಡ ರಾಜ್ಯೋತ್ಸವ ವನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ಕನ್ನಡ ಧ್ವಜವನ್ನು ಹಾರಿಸಿ ನೆರೆದಿದ್ದ ಜನರು ಹಾಗೂ ಕೋಲಾರ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್. ಅನಿಲ ಕುಮಾರ್, ಜಿಲ್ಲಾಧಿಕಾರಿ ಅಕ್ರಮ್ ಪಾಷಾ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್ ಸೇರಿದಂತೆ ಶ್ರೀ ಭುವನೇಶ್ವರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.