ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್ಗೇರಿದರೆ, ಮೂರು ತಂಡಗಳು ಪ್ಲೇಆಫ್ ರೇಸ್ನಲ್ಲಿದೆ. ಅಂದರೆ ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನೇರ ಪೈಪೋಟಿ ಇದೆ.
ಈ ಪೈಪೋಟಿಯಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಇಂದು (ಮೇ.23) ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಪಡೆ ಒಟ್ಟು 15 ಅಂಕಗಳನ್ನು ಪಡೆಯಲಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡ ನೇರವಾಗಿ ಪ್ಲೇಆಫ್ ಗೇರುವುದಿಲ್ಲ. ಬದಲಾಗಿ ಇತರೆ ಎರಡು ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅದರಂತೆ ಪಂಜಾಬ್ ಪಡೆಯ ಪ್ಲೇಆಫ್ ಲೆಕ್ಕಾಚಾರ ಈ ಕೆಳಗಿನಂತಿದೆ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಜಯ ಸಾಧಿಸಿದರೆ, ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಫಲಿತಾಂಶವನ್ನು ಎದುರು ನೋಡಬೇಕು. ಅಂದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲ್ಲುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಅನಿವಾರ್ಯ.ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದು, ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದರೆ ಮತ್ತೊಂದು ಪಂದ್ಯದ ಫಲಿತಾಂಶವನ್ನು ಸಹ ಪಂಜಾಬ್ ಪಡೆ ಎದುರು ನೋಡಬೇಕು. ಅಂದರೆ ಐಪಿಎಲ್ನ 69ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲಬೇಕು.ಅಂದರೆ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದ ಬಳಿಕ, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೋಲಬೇಕು. ಇಂತಹದೊAದು ಫಲಿತಾಂಶ ಮೂಡಿಬಂದರೆ ಮಾತ್ರ ಪಂಜಾಬ್ ಕಿಂಗ್ಸ್ ತಂಡವು 15 ಅಂಕಗಳೊAದಿಗೆ ನೇರವಾಗಿ ಪ್ಲೇಆಫ್ಗೇರಲಿದೆ.
1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್ ಪ್ಲೇಆಫ್ ಲೆಕ್ಕಾಚಾರ



