ಬೆಂಗಳೂರು: “ನಮ್ಮ ಪೊಲೀಸ್ ನಮ್ಮ ಹೆಮ್ಮೆ ” ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ಮಾರ್ಚ್ ಒಂದರAದು ವಿಧಾನಸೌಧ ಮುಂಭಾಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆಗೂಡಿ ಕರ್ನಾಟಕ ರಾಜ್ಯ ಪೊಲೀಸರು ಹಾಗೂ ಸಾರ್ವಜನಿಕರು ೧೦ ಕಿ.ಮೀ ಮತ್ತು ೫ ಕಿ.ಮೀ ಓಟದ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ ಎ ಸಲೀಂ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸ್ಪರ್ಧೆಯ ಪ್ರಯುಕ್ತ ಓಟವು ವಿವಿಧ ಭಾಗಗಳಲ್ಲಿ ೧೮ ಲಕ್ಷಕ್ಕೂ ಹೆಚ್ಚು ರೂಪಾಯಿಗಳ ಆಕರ್ಷಕ ಬಹುಮಾನಗಳನ್ನು ನೀಡಲಿದ್ದು, ವಿಶೇಷ ಚೇತನ ಉತ್ಸಾಹಗಳಿಂದ ಭಾಗವಹಿಸುವಿಕೆಯನ್ನು ಸ್ವಾಗತಿಸುತ್ತಿದೆ. ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಒಳಗೊಂಡ ಸಮುದಾಯ ಯೋಗ ಕ್ಷೇಮಕ್ಕೆ ಸಮಗ್ರ ವಿಧಾನಕ್ಕೆ ಕಾರ್ಯಕ್ರಮದ ಬದ್ಧತೆಯನ್ನು ಎತ್ತಿ ತೋರಿಸುತ್ತವೆ. ರಾಜ್ಯದ್ಯಂತ ಅದೇ ದಿನ ತಮ್ಮ ಜಿಲ್ಲಾ ಕೇಂದ್ರಗಳಲ್ಲಿ ಈ ಓಟವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಾಯೋಜಕರಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಚೀಫ್ ಜನರಲ್ ಮ್ಯಾನೇಜರ್ ಜೋಹಿ ಸ್ಮಿತಾ ಸೀನ ಹಾಗೂ ನಗರ ಪೊಲೀಸ್ ಆಯುಕ್ತ ಸಿಮಂತ್ ಕುಮಾರ್ , ಎನ್ ಐ ಬಿ ಸಂಸ್ಥೆಯ ನಾಗರಾಜ್ ಉಪಸ್ಥಿತರಿದ್ದರು.
“ನಮ್ಮ ಪೊಲೀಸ್ ನಮ್ಮ ಹೆಮ್ಮೆ” ಎಂಬ ಧ್ಯೇಯ ವಾಕ್ಯದೊಂದಿಗೆ ೧೦ ಕಿ.ಮೀ ಮತ್ತು ೫ ಕಿ.ಮೀ ಓಟದ ಸ್ಪರ್ಧೆ



