ಅಮರಾವತಿ: ಖಾಸಗಿ ಬಸ್ವೊಂದು ಟಿಪ್ಪರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ, ಅದರಲ್ಲಿದ್ದ ಕನಿಷ್ಠ 12 ಮಂದಿ ಸಜೀವ ದಹನವಾಗಿ, 20 ಜನರು ಗಾಯಗೊಂಡಿರುವ ದುರ್ಘಟನೆ ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.ಹರಿಕೃಷ್ಣ ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್ ರಾಯವರಂ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತೀವ್ರತೆಗೆ ಬಸ್ ತಕ್ಷಣವೇ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಕೆನ್ನಾಲಿಗೆಗೆ 12 ಮಂದಿ ಸಜೀವ ದಹನವಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಘಟನೆ ಬಗ್ಗೆ ಮಾಹಿತಿ ಪಡೆದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆಯೂ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಅಪಘಾತದ ಕಾರಣ ಕುರಿತು ಸಮಗ್ರ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ಪೊಲೀಸರ ಪ್ರಕಾರ, ಬಸ್ ತೆಲಂಗಾಣದ ನಿರ್ಮಲ್ ನಿಂದ ಆಂಧ್ರಪ್ರದೇಶದ ನೆಲ್ಲೂರಿಗೆ ಪ್ರಯಾಣಿಸುತ್ತಿತ್ತು. ಬಸ್ ಟಿಪ್ಪರ್ಗೆ ಡಿಕ್ಕಿ ಹೊಡೆದ ತೀವ್ರತೆ ಎಷ್ಟಿತ್ತೆಂದರೆ ಯಾರೊಬ್ಬರೂ ತಪ್ಪಿಸಿಕೊಳ್ಳಲು ಅವಕಾಶವೇ ಇರಲಿಲ್ಲ. ಹೀಗಾಗಿ ಇಡೀ ಬಸ್ ಕ್ಷಣಾರ್ಧದಲ್ಲಿ ಬೂದಿಯಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ತಿಳಿಸಿದ್ದಾರೆ. ಬಸ್ ಹೊತ್ತಿ ಉರಿಯುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿವೆ.
ಟಿಪ್ಪರ್ಗೆ ಬಸ್ ಡಿಕ್ಕಿ 12 ಮಂದಿ ಸಜೀವ ದಹನ



