ಬೆಂಗಳೂರು ; ಶಾಸಕ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎನ್.ಎ. ಹ್ಯಾರೀಸ್ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅಶೋಕ ನಗರದ ಗರುಡಮಾಲ್ ಹಿಂಭಾಗದಲ್ಲಿ ರುವ ಹ್ಯಾರೀಸ್ ನಿವಾಸದ ಮೇಲೆ ಇಂದು ಬೆಳಿಗ್ಗೆ 6.30ರ ವೇಳೆಗೆ ದಾಳಿ ನಡೆದಿದೆ. ಇದೇ ಸಂದರ್ಭದಲ್ಲಿ ಹ್ಯಾರೀಸ್ ಅವರ ಪುತ್ರ ಮೊಹಮ್ಮದ್ ನಲ್ಪಾಡ್ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.
ಬಿಟ್ಕಾಯಿನ್ ಹಗರಣದ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಬಿಟ್ಕಾಯಿನ್ ಹಗರಣದ ಪ್ರಮುಖ ಆರೋಪಿಯಾಗಿರುವ ಶ್ರೀಕಿ ಹಾಗೂ ನಲ್ಪಾಡ್ ನಡುವೆ ವ್ಯವಹಾರ ನಡೆದಿದೆ ಎಂದು ಹೇಳಲಾಗುತ್ತಿದೆ. ಸುಮಾರು ನಾಲ್ಕೂವರೆ ಕೋಟಿ ರೂಪಾಯಿ ವ್ಯವಹಾರ ನಡೆದಿದೆ ಎನ್ನಲಾಗಿದ್ದು, ಸುಮಾರು 6 ವರ್ಷಗಳ ಹಿಂದೆ ಈ ಪ್ರಕರಣ ನಡೆದಿದೆ ಎನ್ನಲಾಗಿದ್ದು, ನಲ್ಪಾಡ್ ಜತೆ ಅವರ ಸಹೋದರ ಉಮರ್ ನಿವಾಸದ ಮೇಲೂ ದಾಳಿಯಾಗಿದೆ. ಬೆಳಿಗ್ಗೆ ದಾಳಿಗೆ ಇ.ಡಿ. ಅಧಿಕಾರಿಗಳು ಹ್ಯಾರೀಸ್ ನಿವಾಸದ ಮುಂದೆಯಿದ್ದ ಭದ್ರತಾ ಸಿಬ್ಬಂದಿ ಅಧಿಕಾರಿಗಳನ್ನು ಒಳಗೆ ಬಿಡಲು ನಿರಾಕರಿಸಿದ್ದಾರೆ. ನಂತರ ಅವರನ್ನು ಒಳಗೆಬಿಟ್ಟ ಮೇಲೆ ದಾಳಿ ಸಂದರ್ಭದಲ್ಲಿ ಶಾಸಕ ಹ್ಯಾರೀಸ್ ಅವರು ತಮ್ಮ ನಿವಾಸದಲ್ಲಿಯೇ ಇದ್ದರು ಎಂದು ತಿಳಿದುಬಂದಿದೆ.
ಹ್ಯಾರೀಸ್ಗೆ ಇ.ಡಿ. ಬಿಸಿ ಬೆಂಗಳೂರು ಸೇರಿದಂತೆ 12 ಕಡೆ ದಾಳಿ, ದಾಖಲೆ ಪರಿಶೀಲನೆ



