ಗಾಲೆ: ಆಲ್ರೌಂಡ್ ಪ್ರದರ್ಶನದ ಮೂಲಕ ಮಿಂಚಿದ ಆಸ್ಪ್ರೇಲಿಯಾ ತಂಡ ಇಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಒಂಬತ್ತು ವಿಕೆಟ್ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತು. ಇದರೊಂದಿಗೆ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡ ಆಸ್ಪ್ರೇಲಿಯಾ ತಂಡ, 14 ವರ್ಷಗಳ ತರುವಾಯ ಶ್ರೀಲಂಕಾದಲ್ಲಿ ಮೊದಲ ಟೆಸ್ಟ್ ಸರಣಿ ಗೆದ್ದ ಸಾಧನೆ ಮಾಡಿದೆ. 2011ರಲ್ಲಿ ಕೊನೆಯದಾಗಿ ಲಂಕಾದಲ್ಲಿ ಟೆಸ್ಟ್ ಸರಣಿ ಜಯಿಸಿತ್ತು.
ಪ್ರಥಮ ಇನ್ನಿಂಗ್ಲ್ ನಲ್ಲಿ 156 ರನ್ ಗಳಿಸಿದ್ದ ವಿಕೆಟ್ ಕೀಪರ್ ಬ್ಯಾಟರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಇನ್ನು ಪ್ರಥಮ ಟೆಸ್ಟ್ ನಲ್ಲಿ ಶತಕದೊಂದಿಗೆ 10 ಸಾವಿರ ರನ್ ಪೂರೈಸಿದ್ದ, ಇಡೀ ಟೂರ್ನಿಯಲ್ಲಿ ಒಟ್ಟು 272 ರನ್ ಗಳಿಸಿದ್ದ ನಾಯಕ ಸ್ಟೀವ್ ಸ್ಮಿತ್ ಅವರು ಅರ್ಹವಾಗಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಈಗಾಗಾಲೇ ಐಸಿಸಿ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ಅರ್ಹತೆ ಗಳಿಸಿದ್ದ ಆಸ್ಪ್ರೇಲಿಯಾ, ಅಂಕಪಟ್ಟಿಯಲ್ಲಿ ಶೇ. 67.54 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಮೊದಲ ಸಲ ಫೈನಲ್ ಪ್ರವೇಶಿಸಿರುವ ದಕ್ಷಿಣ ಆಫ್ರಿಕಾ ತಂಡ ಶೇ. 69.44 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ.