ಕೊಲಂಬೊ: ಶ್ರೀಲಂಕಾದಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉದ್ಭವಿಸಿದ್ದು, ಮಣ್ಣುಕುಸಿತ ಉಂಟಾಗುತ್ತಿದೆ. ಇದರಿಂದಾಗಿ ದ್ವೀಪ ರಾಷ್ಟ್ರದಲ್ಲಿ ಇದುವರೆಗೆ 14 ಮಂದಿ ಸಾವಿಗೀಡಾಗಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ.
ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ದಿನಗಳ ಹವಾಮಾನವನ್ನು ಆಧರಿಸಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧರಿಸ ಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಭಾನುವಾರದಿಂದ ಭಾರಿ ಮಳೆ ಸುರಿಯುತ್ತಿದ್ದು, ಮನೆಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ.
ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ರಾಜಧಾನಿ ಕೊಲಂಬೊ ಮತ್ತು ರತ್ನಾಪುರ ಜಿಲ್ಲೆಯಲ್ಲಿ ಆರು ಮಂದಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಮನೆಗಳ ಮೇಲೆ ಮಣ್ಣು ಕುಸಿದು ಇತರ ಮೂವರ ಸತ್ತಿದ್ದು, ಮರ ಬಿದ್ದು ಒಬ್ಬ ಮೃತಪಟ್ಟಿದ್ದಾನೆ.