ಖಟ್ಮಂಡು: ಜಪಾನ್ನಲ್ಲಿ ಒಂದೇ ದಿನ 155 ಭೂಕಂಪಗಳು ಸಂಭವಿಸಿದ್ದು, ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದು, ಹಲವು ಜನ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕುಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಹೆಚ್ಚಿನ ಭೂಕಂಪಗಳು ರಿಕ್ಟರ್ ಮಾಪಕದಲ್ಲಿ 3 ಕ್ಕಿಂತ ಹೆಚ್ಚು ತೀವ್ರತೆಯನ್ನು ಹೊಂದಿವೆ. ಭೂಕಂಪದ ತೀವ್ರತೆ ಕ್ರಮೇಣ ಕಡಿಮೆಯಾಗಿದೆ.
ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು.ದೊಡ್ಡ ಸುನಾಮಿ ಅಲೆಗಳು ಅಪ್ಪಳಿಸಿದ ಕುರಿತು ವರದಿಯಾಗಿಲ್ಲ.2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.
ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಅವಶೇಷಗಳ ಅಡಿಯಲ್ಲಿ ಹುದುಗಿರುವ ಜನರನ್ನು ಪತ್ತೆಮಾಡಲಾಗುತ್ತಿದೆ. ಭೂಕಂಪನದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ವರ್ಷದ ಮೊದಲ ದಿನವೇ ಸೆಂಟ್ರಲ್ ಜಪಾನ್ ನ ನಾಗರೀಕರು ಇಡೀ ರಾತ್ರಿ ಕತ್ತಲೆಯಲ್ಲಿ ಮುಳುಗುವಂತಾಗಿದೆ. ಜಪಾನ್ ಮಿಲಿಟರಿ ಬೇಸ್ ನಲ್ಲಿ ಕನಿಷ್ಠ ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.