ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ತಂಡವು ಆಂಧ್ರಪ್ರದೇಶವನ್ನು ಸೋಲಿಸಿದೆ. ಅಜಿಂಕ್ಯ ರಹಾನೆ ಅವರ 95 ರನ್ಗಳ ಅದ್ಭುತ ಇನ್ನಿಂಗ್ಸ್ ಈ ಗೆಲುವಿಗೆ ಪ್ರಮುಖ ಕಾರಣ. 230 ರನ್ಗಳ ಗುರಿ ಬೆನ್ನಟ್ಟಿದ ಮುಂಬೈಗೆ ರಹಾನೆ ಮತ್ತು ಪೃಥ್ವಿ ಶಾ ಉತ್ತಮ ಆರಂಭ ನೀಡಿದರು. ರಹಾನೆ 9 ಬೌಂಡರಿ ಮತ್ತು 4 ಸಿಕ್ಸರ್ಗಳೊಂದಿಗೆ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅಜಿಂಕ್ಯ ರಹಾನೆ ಅವರ ಅದ್ಭುತ ಪ್ರದರ್ಶನ ಮುಂದುವರಿದಿದೆ. ಆಂಧ್ರಪ್ರದೇಶ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ ರಹಾನೆ ಕೇವಲ ಐದೇ ಐದು ರನ್?ಗಳಿಂದ ಶತಕವಂಚಿತರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಆಂಧ್ರಪ್ರದೇಶ ನೀಡಿದ 230 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಮುಂಬೈ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ರಹಾನೆ 9 ಬೌಂಡರಿ ಮತ್ತು 4 ಸಿಕ್ಸರ್ಗಳ ಸಹಿತ 95 ರನ್ ಸಿಡಿಸಿದರು.