ಬೆಂಗಳೂರು: ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿಗುರುಪೀಠದ ಪೀಠಾಧ್ಯಕ್ಷ ರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿಯವರು ಮತ್ತು ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಯವರ ನೇತೃತ್ವದಲ್ಲಿ ವಿಶೇಷ ಪತ್ರಿಕಾಗೋಷ್ಠಿ ಜರುಗಿತು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಭೋವಿ ಸಮಾಜ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಇದೇ 20ರಂದು ದೀಕ್ಷಾ ರಜತ ಮಹೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.ಸಾಮಾಜಿಕ ಕ್ಷೇತ್ರದಲ್ಲಿ, ರಾಜಕೀಯ ಕ್ಷೇತ್ರದಲ್ಲಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ, ಅನಾದಿಕಾಲದಿಂದ ಭೋವಿ ಸಮಾಜ ನೀಡುತ್ತಾ ಬಂದಿರುವ ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ ಮತ್ತು ಭೋವಿ ಸಮಾಜಕ್ಕೆ ರಾಷ್ಟ್ರಮಟ್ಟದ ಮನ್ನಣೆ ಹಾಗೂ ಕೇಂದ್ರ ಸರ್ಕಾರದ ಅನೇಕ ಸವಲತ್ತುಗಳನ್ನು ಸಮಾಜಕ್ಕೆ ನೀಡುವ ನಿಟ್ಟಿನಲ್ಲಿ ಒಗಟ್ಟಾಗಿ ನಡೆಯಬೇಕಾಗಿದೆ ಅದಕ್ಕಾಗಿ ಒಂದು ಸಂಘಟನೆಯ ಅವಶ್ಯಕತೆ ಇದೆ.
ಕರ್ನಾಟಕ ಮಾತ್ರವಲ್ಲದೆ ನೆರೆಯ ಆಂಧ್ರ ತೆಲಂಗಾಣ ತಮಿಳುನಾಡು ರಾಜ್ಯಗಳ ಭೋವಿ ಜನಾಂಗವನ್ನು ಒಟ್ಟಾಗಿ ಸೇರಿಸುವ ನಿಟ್ಟಿನಲ್ಲಿ ಒಂದು ಅಭೂತಪೂರ್ವ ಸಮ್ಮೇಳನವನ್ನು ಏರ್ಪಡಿಸಿ ಸಂಘಟನೆಯ ಶಕ್ತಿ ಮತ್ತು ಸಮಾಜದ ಬಲವರ್ಧನೆಗೆ ಶ್ರಮಿಸಲು ಸಮ್ಮೇಳನವನ್ನು ಏರ್ಪಡಿಸುತ್ತಿರುವುದಾಗಿ ತಿಳಿಸಿದರು. ಎಲ್ಲಾ ಮಾಧ್ಯಮ ಮತ್ತು ಪ್ರಿಂಟ್ ಮೀಡಿಯಾ ದವರ ಸಹಕಾರವನ್ನು ಕೋರಿದರು.ಕಾರ್ಯಕ್ರಮದಲ್ಲಿ ಎಸ್ ರವಿಕುಮಾರ್ ಅಧ್ಯಕ್ಷರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕರ್ನಾಟಕ ಸರ್ಕಾರ, ಬೆಂಗಳೂರು ಮುಂತಾದ ಭೋವಿ ಸಮಾಜದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.



