ದೊಡ್ಡಬಳ್ಳಾಪುರ: ಭಾರತ ಚುನಾವಣಾ ಆಯೋಗ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಮತ್ತು ನಿಮ್ಹಾನ್ಸ್ ಬೆಂಗಳೂರು ರವರ ಸಹಯೋಗದೊಂದಿಗೆ ಇಂದು ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24 ನೇ ಸಾಲಿನ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಅರವಿಂದ ಸಾಯಿಬಣ್ಣ ಹಾಗರಿಗಿ ಅವರು ಉದ್ಘಾಟನೆ ಮಾಡಿದರು.
ಕಾರ್ಯಾಗಾರ ದಲ್ಲಿ ಮತದಾನದ ಜಾಗೃತಿ ಮೂಡಿಸಿ, ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಈ ಸಂದರ್ಭದಲ್ಲಿ ಯುವ ಸಬ
ಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ, ಸದಾಶಿವ ರಾಮಚಂದ್ರಗೌಡ ಪ್ರಾಂಶುಪಾಲರು, ನಾಗರಾಜು ರಾಜ್ಯ ಸಂಯೋಜಕರು ನಿಮಾನ್ಸ್, ಶಶಿಕುಮಾರ್ ಉದ್ಯಮಶೀಲತಾ ತರಬೇತಿದಾರರು ಅಧ್ಯಾಪಕರಾದ ಅರ್ಚನಾ, ಸತ್ಯನಾರಾಯಣ ಗೌಡ ಮತ್ತಿತರರು ಉಪಸ್ಥಿತರಿದ್ದರು.