ಢಾಕಾ: ಬಾಂಗ್ಲಾದೇಶದಲ್ಲಿ ಸಾರಿಗೆ ದೋಣಿಯ ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ಬಸ್ ಆಕಸ್ಮಿಕವಾಗಿ ನದಿಗೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಬಾಂಗ್ಲಾದೇಶದ ನೈಋತ್ಯ ಜಿಲ್ಲೆಯ ರಾಜ್ಬರಿಯಲ್ಲಿ ದೌಲಾಡಿಯಾ ಟರ್ಮಿನಲ್ನಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಆಯತಪ್ಪಿ ಪದ್ಮಾ ನದಿಗೆ ಉರುಳಿದೆ.ಬುಧವಾರ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾಜ್ಬರಿಯಿಂದ ಢಾಕಾದಿಂದ 128 ಕಿಲೋಮೀಟರ್ ದೂರದಲ್ಲಿರುವ ಢಾಕಾಗೆ ಪ್ರಯಾಣಿಸುತ್ತಿತ್ತು. ಬಸ್ ಸಾರಿಗೆ ದೋಣಿಯ ಮೇಲೆ ಹತ್ತುವಾಗ ಈ ಅಪಘಾತ ಸಂಭವಿಸಿದೆ. ಇದರಿಂದ ಬಸ್ನಲ್ಲಿದ್ದ ಪ್ರಯಾಣಿಕರು ನೀರಿಗೆ ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ಸೇವೆ ಮತ್ತು ಡೈವರ್ಗಳ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಿವೆ.
ಬಸ್ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ 50 ಜನರನ್ನು ತುಂಬಿಸಿಕೊAಡಿತ್ತು. ವಿಪರೀತ ಭಾರವಾಗಿ ಬಸ್ ಆಯತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ರಕ್ಷಣಾ ಹಡಗು ಹಮ್ಜಾ ಈ ಘಟನೆ ನಡೆದ 6 ಗಂಟೆಗಳ ನಂತರ ನದಿಯಿಂದ ಬಸ್ ಅನ್ನು ಹೊರತೆಗೆದಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.
ನದಿಗೆ ಉರುಳಿದ ಬಸ್ : 23 ಮಂದಿ ಬಲಿ



