ನೆಲಮಂಗಲ : ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆಯಾಗಿದೆ ಎಂದು ನಗರಸಭೆ ಉಪಾಧ್ಯಕ್ಷೆ ಸುಜಾತ ಮುನಿಯಪ್ಪ ಅವರು ನುಡಿದರು.
ನೆಲಮಂಗಲ ನಗರಸಭೆ ವ್ಯಾಪ್ತಿಯ ಶ್ರೀ ಲಕ್ಷ್ಮೀನಾರಾಯಣ ಪಾಟೀದಾರ್ ಕಲ್ಯಾಣ ಮಂಟಪದಲ್ಲಿ ನ್ಯೂ ಸೆಂಚುರಿ ಶಾಲೆಯ 24ನೇ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೆಲವು ಮಕ್ಕಳು ಕೇವಲ ಒಂದೇ ವಿಷಯಕ್ಕೆ ಸೀಮಿತವಾಗಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ.
ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳುವುದು ಒಳ್ಳೆಯ ಬೆಳವಣಿಗೆಯಾಗಿದೆ. ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್. ಟಿವಿಗೆ ಅಂಟಿಕೊಂಡಿರುತ್ತಾರೆ ಮತ್ತೆ ಕೆಲವರು ಯಾರೊಂದಿಗೂ ಬೆರೆಯದೆ ಒಬ್ಬಂಟಿಯಾಗಿರಲು ಬಯಸುತ್ತಾರೆ ಆದರೆ ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳಬೇಕು.
ಚಿಕ್ಕಂದಿನಿಂದಲೇ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಬುದ್ಧಿಶಕ್ತಿ ಧೈರ್ಯ ಹೆಚ್ಚಿ ಭಯ ಹೋಗಲಾಡಿಸಬಹುದು ವರ್ಷದ ಶಾಲಾ ವಾರ್ಷಿ ಕೋತ್ಸವದಲ್ಲಿ ಮಕ್ಕಳು ಮನರಂಜನೆಗಳಲ್ಲಿ ಭಾಗವಹಿಸುವುದರಿಂದ ನಷ್ಟವಾಗುವುದಿಲ್ಲ ಇದಕ್ಕೆ ಪೋಷಕರ ಸಹಮತವೂ ಇರಬೇಕಿದೆ ಎಂದು ಹೇಳಿದರು.
ನ್ಯೂ ಸೆಂಚುರಿ ಶಾಲೆಯ 24ನೇ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ. ವೇಷಭೂಷಣ ಸ್ಪರ್ಧೆಯಲ್ಲಿ 4ನೇ ತರಗತಿ ವಿದ್ಯಾರ್ಥಿ ಮಾನ್ಯ.ಜಿ ಪ್ರಥಮ ಬಹುಮಾನವನ್ನು ಪಡೆದರು.ಬಳಿಕ ಶಾಲಾ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ಮೂಡಿಬಂದವು. ಕಾರ್ಯಕ್ರಮದಲ್ಲಿ ವಿಪಿ ಮ್ಯಾಗ್ನೆಸ್ ಆಸ್ಪತ್ರೆ ಮುಖ್ಯಸ್ಥ ಡಾ.ವಿಕಾಸ್.ಎಂ. ನಗರಸಭೆ ಸದಸ್ಯರಾದ ಕೆ ಬಿ ಶಿವಕುಮಾರ್. ಅಂಜನಾ ಮೂರ್ತಿ. ಲೋಲಾಕ್ಷಿ ಗಂಗಾಧರ್. ನ್ಯೂ ಸೆಂಚುರಿ ಶಾಲಾ ಮುಖ್ಯಸ್ಥೆ ಮಮತ.ಎಂ. ಕಾರ್ಯದರ್ಶಿ ಕಾರ್ಣಿಕ್ ಗಂಗಪ್ಪ. ಮುಖ್ಯ ಶಿಕ್ಷಕಿ ಅಕ್ಷತಾ.ಎನ್. ಹಾಗೂ ಶಾಲಾ ಸಿಬ್ಬಂದಿ ವರ್ಗ ಇದ್ದರು.