ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕಡಲಬಾಳು ಗ್ರಾಮದ ಸಿಂಧು ಮತ್ತು ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಪಿದ್ದಗಿ ಗ್ರಾಮದ ಶ್ರೀಶೈಲ ಹಾಗೂ ಹಾಸನದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ವಿಜಯಪುರದ ಗುಟ್ಟಿಹಾಲ್ ಗ್ರಾಮದ ಮುತ್ತಣ್ಣ ಫತ್ತೇಪೂರ ಅವರಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ಅವರು ತಮ್ಮ ಗೃಹ ಕಚೇರಿಯಲ್ಲಿ ಆರ್ಥಿಕನೆರವು ನೀಡಿದ್ದು, ಈ ಸಂಬAಧ ತಮ್ಮ ಸ್ವಂತ ಹಣದಲ್ಲಿ ಚೆಕ್ ನೀಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.



