ಯಲಹಂಕ: ಬೆಂಗಳೂರು ಉತ್ತರ ತಾಲೂಕು ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾದನಾಯಕನಹಳ್ಳಿ ನಗರಸಭೆ, ಕಿತ್ತನಹಳ್ಳಿ ಕಾಚೋಹಳ್ಳಿ ಹಾಗೂ ದಾಸನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ 3 ಕೋಟಿ 25 ಲಕ್ಷ ರೂ ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ದೊರಕುತ್ತಿಲ್ಲ ಈಗಾಗಲೇ ಮುಖ್ಯ ಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕ್ಷೇತ್ರಕ್ಕೆ ಬೇಕಾದ ಅನುದಾನದ ಬಗ್ಗೆ ಪ್ರಸ್ತಾಪವನ್ನು ಸಲ್ಲಿಸಿದ್ದೇನೆ ಶೀಘ್ರವೇ ಅನುದಾನ ನೀಡುವ ಭರವಸೆಯನ್ನು ನೀಡಿದ್ದಾರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಮಾದನಾಯಕನಹಳ್ಳಿ ನಗರಸಭೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ 87 ಯುಪಿಎಸ್, ವಿದ್ಯಾರ್ಥಿಗಳಿಗೆ 14 ಲ್ಯಾಪ್ಟಾಪ್, 4 ಐರನ್ ಬಾಕ್ಸ್ , 10 ಸೆಟ್ ಶೇವಿಂಗ್ ಕಿಟ್ ಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತ ಕೃಷ್ಣ ಮೂರ್ತಿ, ಸೌಮ್ಯ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಹನುಮಯ್ಯ, ಕೊಳ್ಳಿಗನಹಳ್ಳಿ ವೆಂಕಟೇಶ್, ಮಾದನಾಯಕನಹಳ್ಳಿ ಮಾಜಿ
ಗ್ರಾಪಂ ಅಧ್ಯಕ್ಷ ಜಿ ಜೆ ಮೂರ್ತಿ, ಬೈಲಪ್ಪನ ಪಾಳ್ಯ ಮೋಹನ್ ಕುಮಾರ್, ಮುಕೇಶ್, ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಕೃಷ್ಣಯ್ಯ, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.