ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 30.10 ಕೋಟಿ ಅಂದಾಜು ಮೌಲ್ಯದ ಒಟ್ಟು 09 ಎಕರೆ 0.21 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ. ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕಾಲುವೆ, ಗೋಮಾಳ, ಕುಂಟೆ, ತೋಪು, ಸ್ಮಶಾನ, ಗುಂಡುತೋಪು, ಸರ್ಕಾರಿ ಗೋಮಾಳ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ದೊಡ್ಡಬನಹಳ್ಳಿ ಗ್ರಾಮದ ಸ.ನಂ 115 ರ ಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.60 ಲಕ್ಷಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ದೊಡ್ಡಬನಹಳ್ಳಿ ಗ್ರಾಮದ ಸ.ನಂ 3 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.15 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 2.50. ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ಕಟ್ಟುಗೊಲ್ಲಹಳ್ಳಿಯ ಗ್ರಾಮದ ಸ.ನಂ 39 ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ಬಳಿಶಿವಾಲೆ ಗ್ರಾಮದ ಸ.ನಂ 78 ರ ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.13 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ವಾಲೇಪುರ ಗ್ರಾಮದ ಸ.ನಂ 9 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.80 ಲಕ್ಷಗಳಾಗಿರುತ್ತದೆ.ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ದೊಡ್ಡಮಾರನಹಳ್ಳಿ ಗ್ರಾಮದ ಸ.ನಂ 22 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.50 ಲಕ್ಷಗಳಾಗಿರುತ್ತದೆ.ಯಲಹಂಕ ತಾಲ್ಲೂಕಿನ ಹೆಸರುಘಟ್ಟ ಹೋಬಳಿಯ ಅರಕೆರೆ ಗ್ರಾಮದ ಸ.ನಂ. 130 ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 1.20 ಕೋಟಿಗಳಾಗಿರುತ್ತದೆ. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಬೊಮ್ಮಶೆಟ್ಟಿಹಳ್ಳಿ ಗ್ರಾಮದ ಸ.ನಂ 61 ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 07 ಎಕರೆ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 22.50 ಕೋಟಿಗಳಾಗಿರುತ್ತದೆ.ಇದೇ ಸಂದರ್ಭದಲ್ಲಿ ಬೆಂಗಳೂರು ನಗರದ ವಿವಿಧ ತಾಲ್ಲೂಕಿನ ತಹಶೀಲ್ದಾರ್ ರವರು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು.
30.10 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ



