ರಾಜ್ಯ ರಾಜಕಾರಣದಲ್ಲಿ ಈಗ ಕಾಂಗ್ರೆಸ್ ಪಕ್ಷದ್ದೇ ಸದ್ದು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದಾದ ಮೇಲೆ ಒಂದು ಬೆಳವಣಿಗೆ ನಡೆಯುತ್ತಲೇ ಇದೆ. ಎರಡನೇ
ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಪಕ್ಷದಲ್ಲಿ ವಿಚಿತ್ರ ಬೆಳವಣಿಗೆಗಳು ನಡೆಯುತ್ತಿವೆ. ಸಚಿವರಾಗಿದ್ದ ನಾಗೇಂದ್ರ ಹಗರಣದ ಬೆನ್ನಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿತ್ತು. ನಿರಂತರವಾಗಿ ಅಧಿಕಾರಕ್ಕೆ ಬಂದಾಗಿನಿAದ ನಿರಂತರವಾಗಿ ಮುಖ್ಯಮAತ್ರಿ ಪಾಳಯದಲ್ಲಿ
ಗುರುತಿಸಿಕೊಂಡಿದ್ದ ಸಚಿವ ರಾಜಣ್ಣ ಮಂತ್ರಿ ಸ್ಥಾನದಿAದ ಉಚ್ಛಾಟನೆಯಾದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಪಕ್ಷದಲ್ಲಾದ ಒಡಂಬಡಿಕೆಯಿAದ ತಮ್ಮ ಸ್ಥಾನವನ್ನು ಡಿಸೆಂಬರ್ನಲ್ಲಿ ತ್ಯಜಿಸಲಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಭವಿಷ್ಯ ನುಡಿದ ಬೆನ್ನಲ್ಲೇ ಇದೀಗ ನವೆಂಬರ್ ತಿAಗಳಲ್ಲಿ ಅಧಿಕಾರ ಬದಲಾವಣೆ ಖಚಿತ ಎಂದು ಪದೇ ಪದೇ ಪುನರುಚ್ಛರಿಸುತ್ತಲೇ ಇದ್ದಾರೆ.
ಅದಕ್ಕೆ ಇಂಬು ಕೊಡುವಂತೆ ಸಿದ್ದರಾಮಯ್ಯ ಬದಲಾವಣೆ ಖಚಿತ ಎಂದು ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಹೇಳುತ್ತಾ ಬಂದರೂ ಮತ್ತೆ ಕೆಲವರು ಅವರ
ಅಧಿಕಾರ ೫ ವರ್ಷ ಪೂರೈಸುತ್ತಾರೆ ಎಂದು ಹೇಳುತ್ತಲೇ ಇದ್ದಾರೆ. ಸಿದ್ದರಾಮಯ್ಯ ಬದಲಾವಣೆಯಾಗುತ್ತದೋ ಇಲ್ಲವೋ ಎಂಬ ಕೂಗು ಈಗ ಕಾಂಗ್ರೆಸ್ ಪಕ್ಷದಲ್ಲಿ ಪ್ರತಿನಿತ್ಯ ಕೇಳಿಬರುತ್ತಿದೆ. ಇದರ ಮಧ್ಯದಲ್ಲೇ ಸಚಿವ ಸಂಪುಟ ಪುನರ್ ರಚನೆಯಾಗುತ್ತದೆ ಎಂಬ ಸದ್ದು ಜೋರಾಗಿ ಕೇಳಿಬರುತ್ತಿದೆ.
ಸುಮಾರು ೧೦ರಿಂದ ೧೫ ಮಂದಿ ಸಚಿವರ ಬದಲಾವಣೆ ಖಚಿತ ಎಂಬ ಸದ್ದು ಕೇಳಿಬರುತ್ತಿರುವ ಬೆನ್ನಲ್ಲೇ ಹಲವು ಶಾಸಕರು ಸಚಿವರಾಗಲು ತಾ ಮುಂದು, ನಾ
ಮುಂದು ಎಂದು ಹಾತೊರೆಯುತ್ತಿದ್ದಾರೆ. ಈಗಾಗಲೇ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್, ಕೆಜಿಎಫ್ನ ರೂಪಕಲಾ ಶಶಿಧರ್, ಮಾಜಿ ಮಂತ್ರಿ ಲಕ್ಷö್ಮಣ ಸವದಿ, ಹಾಗೂ ಮತ್ತಿತರರು ಸಚಿವರಾಗುವ ಇಂಗಿತವನ್ನು ಬಹಿರAಗಾವಾಗಿಯೇ ಹೇಳಿದ್ದಾರೆ. ನಿನ್ನೆ ಕೆಜಿಎಫ್ನಲ್ಲಿ ಶಾಸಕಿ ಮಾಜಿ ಕೇಂದ್ರ ಮಂತ್ರಿ ಹಾಲಿ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ ಅವರ ಪುತ್ರಿ ರೂಪುಕಲಾ ಶಶಿಧರ್ ಮಂತ್ರಿಯಾಗಲು ತಮ್ಮ ತಂದೆ ಮುನಿಯಪ್ಪ ಸ್ಥಾನ ತ್ಯಜಿಸಬೇಕಾಗಿಲ್ಲ.
ಅವರು ಸ್ಥಾನ ತ್ಯಜಿಸಿ ನನಗೆ ಮಂತ್ರಿ ಸ್ಥಾನ ಕೊಡುವುದು ಬೇಡ ನನ್ನ ಸಾಮರ್ಥ್ಯದ ಮೇಲೆ ನನಗೆ ಮಂತ್ರಿ ಸ್ಥಾನ ಸಿಗಲಿ ಎಂಬ ಮಾತನಾಡಿದ್ದಾರೆ. ಹೀಗಾಗಿ ಶಶಿಕಲಾ ಸಹ ಮಂತ್ರಿ ಆಕಾಂಕ್ಷಿಯಾಗಿದ್ದಾರೆ. ಮಾಜಿ ಮಂತ್ರಿ ಲಕ್ಷö್ಮಣ ಸವದಿ ತಾವು ಡಿಸೆಂಬರ್ ತಿಂಗಳ ವೇಳೆಗೆ ಮಂತ್ರಿಯಾಗುತ್ತೇನೆ ಎಂಬ ಹೇಳಿಕೆ ನೀಡಿದ್ದು, ತಾವು ಅಧಿಕಾರಕ್ಕೆ ಬಂದರೆ ಕಬ್ಬಿನ ತೂಕ ಕದಿಯುವ ಕಳ್ಳರನ್ನು ಮಟ್ಟ ಹಾಕುತ್ತೇನೆ ಎಂದು ಪರೋಕ್ಷವಾಗಿ ಕಬ್ಬಿನ ಕಾರ್ಖಾನೆ ಮಾಲೀಕರ ವಿರುದ್ಧ
ಗುಡುಗಿದ್ದಾರೆ. ತಮಗೆ ಸಹಕಾರ ಸಚಿವ ಸ್ಥಾನ ದೊರೆಯುವುದು ಖಚಿತ ಎಂಬ ಭವಿಷ್ಯ ನುಡಿಯುತ್ತಿದ್ದು, ಡಿಸೆಂಬರೊಳಗೆ ತಮಗೆ ಶುಕ್ರದೆಶೆ ಕೂಡಿಬರುತ್ತದೆ ಎಂದು ಹೇಳಿದ್ದಾರೆ.
ಇAಡಿ ಕ್ಷೇತ್ರದ ಯಶವಂತಗೌಡ ಪಾಟೀಲ್ ಚುನಾವಣಾ ಸಂದರ್ಭದಲ್ಲಿ ಸಚಿವರಾದ ಎಂ.ಬಿಪಾಟೀಲ್, ಶಿವಾನAದಪಾಟೀಲ್ ಅವರು ಒಟ್ಟಿಗೆ ಕೂತು
ಮಾತನಾಡಿದಾಗ ತಮಗೆ ಸಚಿವ ಸ್ಥಾನ ನೀಡುವುದು ಗ್ಯಾರಂಟಿ ಎಂಬ ಭರವಸೆ ವ್ಯಕ್ತಪಡಿಸಿದ್ದರು. ಹಾಗಾಗಿ ತಮಗೆ ಸಚಿವ ಸ್ಥಾನ ದೊರೆಯುವುದು ಖಚಿತ ಎಂಬ ವಿಶ್ವಾಸದಲ್ಲಿದ್ದಾರೆ. ಇದಲ್ಲದೆ ಮೈಸೂರಿನ ತನ್ವೀರ್ಸೇಠ್ ಸೇರಿದಂತೆ ಹಲವರು ಸಚಿವಾಕಾಂಕ್ಷಿಗಳಾಗಿದ್ದಾರೆ. ಈ ಮಧ್ಯೆ ಬಿಹಾರದ ಚುನಾವಣೆ ನಡೆದ ನಂತರ ಸಂಪುಟ ಪುನರ್ ರಚನೆ ಎಂಬ ಮಾತುಕೇಳಿಬರುತ್ತಿದೆ. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ಪುನರ್ ರಚನೆ ಕೂಗೆದ್ದಿರುವುದು ಹಲವು
ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಪಕ್ಷದ ದೃಷ್ಟಿಯಿಂದ ಬಿಹಾರ ಚುನಾವಣೆ ಸಂದರ್ಭದಲ್ಲಿ ಈ ಕೂಗೆದ್ದಿರುವುದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಪಕ್ಷದಲ್ಲಿ ಕ್ರಾಂತಿಯ ಕಹಳೆ ಜತೆಗೆ ಸಂಪುಟ ಪುನರ್ರಚನೆಯ ಮಾತು ಕೇಳಿಬರುತ್ತಿರುವುದು ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿಯೇ ನಡೆದಿವೆ. ರಾಷ್ಟಿçÃಯ
ಸ್ವಯಂಸೇವಕ ಸAಘ ಸಂಸ್ಥೆಯಿAದ ವಿಜಯದಶಮಿ ಪಥಸAಚಲನವನ್ನು ಹೊAಬೇಗೌಡ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪಾಲ್ಗೊಂಡಿದ್ದರು. ಕೇAದ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಬಿಎಸ್ ಯಡಿಯೂರಪ್ಪನವರು ಹಾಗೂ ಬಿಜೆಪಿ
ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರು ಮಾಜಿ ಪ್ರಧಾನ ಮಂತ್ರಿ ದೇವೇಗೌಡರ ಆರೋಗ್ಯ ವಿಚಾರಿಸಿದರು. ಮತ್ತಿಕರೆಯ ಜೆಪಿ ಪಾರ್ಕ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ವೇದಿಕೆ ಕಾರ್ಯಕ್ರಮದಲ್ಲಿ ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಬಹಿರಂಗವಾಗಿಯೇ,ಆಕ್ರೋಶ ಹೊರಹಾಕಿದ್ದಾರೆ.
ಆರ್ಎಸ್ಎಸ್ ಡ್ರೆಸ್, ಟೋಪಿ ಧರಿಸಿ ಜೆಪಿ ಪಾರ್ಕ್ಗೆ ಬಂದ ಬಿಜೆಪಿ ಶಾಸಕ ಮುನಿರತ್ನ ಅವರನ್ನುಡಿಕೆ ಶಿವಕುಮಾರ್ ನಿರ್ಲಕ್ಷಿ÷್ಯಸಿದರು. ಡಿಕೆಶಿ ವೇದಿಕೆಯಲ್ಲಿ ಕುಳಿತಾಗಲೂ ಶಾಸಕ ಮುನಿರತ್ನ ಕೆಳಗೆ ಜನರ ಮಧ್ಯೆ ಕುರ್ಚಿಯಲ್ಲಿ ಕುಳಿತರು. ಆಗ ಡಿಸಿಎಂ `ಹೇಯ್, ಕಪುö್ಪ ಟೋಪಿ ಎಂಎಲ್ಎ ಬಾರಯ್ಯ’ ಎಂದು ಕರೆದರು. ಆದರೆ, ಅದಕ್ಕೆ ಒಪ್ಪದ ಮುನಿರತ್ನ `ನಾನು ಜನರ ಮಧ್ಯದಲ್ಲೇ ಕೂರುತ್ತೇನೆ’ ಎಂದು ಹೇಳಿದರು. ಇದಾದ ನಂತರ ಇದ್ದಕ್ಕಿದ್ದAತೆ ಎದ್ದು ನಿಂತು ಡಿಕೆ ಶಿವಕುಮಾರ್ ಅವರ ವಿರುದ್ಧ ಮುನಿರತ್ನ ಪ್ರತಿಭಟನೆ ನಡೆಸಿದರು.
`ಬೆಂಗಳೂರು ನಡಿಗೆ ಸರ್ಕಾರದ ಕಾರ್ಯಕ್ರಮವಾದರೂ ಶಾಸಕನಾದ ನನಗೆ ಆಹ್ವಾನ ನೀಡದೆ ಅಗೌರವ ತೋರಿದ್ದಾರೆ. ಈ ಕಾರ್ಯಕ್ರಮದಲ್ಲೆಲ್ಲೂ
ಶಾಸಕನ ಒಂದು ಫೋಟೋ ಕೂಡ ಹಾಕಿಲ್ಲ, ನನಗೆ ಆಹ್ವಾನ ನೀಡಿಲ್ಲ’ ಎಂದು ಮುನಿರತ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ. `ಸರ್ಕಾರದ ಕಾರ್ಯಕ್ರಮಕ್ಕೆ ಸಂಸದರು, ಶಾಸಕರಿಗೆ ಆಹ್ವಾನ ನೀಡದಿರುವುದು ತಪುö್ಪ. ಸರ್ಕಾರದ ಕಾರ್ಯಕ್ರಮದಲ್ಲಿ ಸಂಸದ, ಶಾಸಕರ ಫೋಟೋ ಇಲ್ಲ. ಇದು ಸಾರ್ವಜನಿಕ ಕಾರ್ಯಕ್ರಮ ಅಲ್ಲ, ಕಾಂಗ್ರೆಸ್ ಕಾರ್ಯಕ್ರಮ’ ಎಂದು ಮುನಿರತ್ನ ಆರೋಪಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಮುನಿರತ್ನ ಬೆಂಬಲಿಗರು ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು.
ವೇದಿಕೆಯಲ್ಲೇ ಗಲಾಟೆ ನಡೆಸಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರಿಂದಾಗಿ ಹೈಡ್ರಾಮಾ ಸೃಷ್ಟಿಯಾಯಿತು. ಅಲ್ಲಿ ಸೇರಿದ್ದ ಜನರು ಮೂಕಪ್ರೇಕ್ಷಕರಾಗಿ
ನೋಡುತ್ತಾ ನಿಂತರು. ರಾಜಕೀಯ ಮಾಡಲು ಇಲ್ಲಿಗೆ ಬರಬೇಡಿ ಎಂದು ಕಾAಗ್ರೆಸ್ ಕಾರ್ಯಕರ್ತರು ಮುನಿರತ್ನ ಬೆಂಬಲಿಗರಿಗೆ ಎಚ್ಚರಿಕೆ ನೀಡಿದರು. ಕಾರ್ಯಕರ್ತರು ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. `ರೇಪಿಸ್ಟ್ ಮುನಿರತ್ನ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ಗಲಾಟೆ ಹೆಚ್ಚಾಗುತ್ತಿದ್ದಂತೆ ಮುನಿರತ್ನ ಅವರನ್ನು ಪೊಲೀಸರು ಜೆಪಿ ಪಾರ್ಕ್ನಿಂದ ಕರೆದೊಯ್ದರು.
ಶಾಸಕ ಬೇಳೂರಿಗೆ ಸಚಿವ ಸ್ಥಾನ ಖಚಿತ|? ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸದ್ದು ಕೇಳಿ ಬರುತ್ತಿದೆ.
ಹಾಲಿ ಸಚಿವರಲ್ಲಿ ಕೆಲವರಿಗೆ ಗೇಟ್ ಪಾಸ್ ನೀಡಲು ಸಿಎಂ ಸಿದ್ಧರಾಮಯ್ಯ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಹೊಸಬರಿಗೆ ಅವಕಾಶವನ್ನು ನೀಡೋದಕ್ಕೆ ಪಟ್ಟಿ ತಯಾರಾಗಿದೆ. ಈ ಪಟ್ಟಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹೆಸರು ಕೂಡ ಇರುವುದಾಗಿ ಹೇಳಲಾಗುತ್ತಿದೆ.