ನವೆಂಬರ್ ೧೯ ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಅಕ್ಕಾಪಡೆಗೆ ಚಾಲನೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ÷್ಮÃ ಹೆಬ್ಬಾಳಕರ್ ಅವರು ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು, ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿ, ಮಾರ್ಗದರ್ಶನ ಪಡೆದರು.


		
		
		
		