ಬೆAಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರಗೆ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬವನ್ನು ಪ್ರತಿಭಟನಾ ಸ್ಥಳದಲ್ಲಿ ಆಚರಿಸಿಕೊಂಡು, ಪ್ರತಿಭಟನಾಕಾರರಿಗೆ ಸಾಥ್ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡು ರೈತರ ಸಂಕಷ್ಟದಲ್ಲಿ ಪಾಲ್ಗೊಂಡಿದ್ದಾರೆ.ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನಿಗದಿ ಮಾಡದ ಹಿನ್ನೆಲೆ ಕಳೆದೊಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ನಿನ್ನೆಯೇ ತೆರಳಿ, ಕಬ್ಬು ಬೆಳೆಗಾರರಿಗೆ ಸಾಥ್ ನೀಡಿದ್ದಾರೆ. ಇಷ್ಟಾದರೂ ಸರ್ಕಾರ ಬೆಂಬಲ ಬೆಲೆ ನಿಗದಿ ಮಾಡಿಲ್ಲ. ಅದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಸಜ್ಜಾಗಿದ್ದಾರೆ. ಹೀಗಾಗಿ, ಇಂದು ಹುಟ್ಟುಹಬ್ಬವಿದ್ದರೂ ಸಹ, ರೈತರ ಸಂಕಷ್ಟಕ್ಕೆ ಹೆಗಲು ಕೊಡುವುದು ಮುಖ್ಯ ಎಂದು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.



