ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರುಗಳಾದ ಶಿವರಾಜ್ ತಂಗಡಗಿ, ಹೆಚ್.ಸಿ. ಮಹದೇವಪ್ಪ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಮತ್ತಿತರರ ಗಣ್ಯರು ಹಾಜರಿದ್ದರು.



