ಕೋಲಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಶೇಷ ಚೇತನರ ಹಾಗೂ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದ ವತಿಯಿಂದ ಹಿರಿಯ ನಾಗರಿಕರಿಗೆ ಸರಕಾರದಿಂದ ಸಿಗುವ ಸೌಲಭ್ಯ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ನಟೇಶ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಎನ್ ನಾರಾಯಣಸ್ವಾಮಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ ರವರು ವಹಿಸಿದ್ದರು. ಅತಿಥಿ ಉಪನ್ಯಾಸಕರಾಗಿ ವಕೀಲರಾದ ಶ್ರೀಮತಿ ಸುಜಾತಾ. ಹಿರಿಯ ನಾಗರಿಕ ಸಂಘದ ಅಧ್ಯಕ್ಷ ಗೋವಿಂದಪ್ಪ ಹಾಗೂ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಶ್ರೀಮತಿ ಆರ್. ಮಂಜುಳ ಹಾಗೂ ಹಿರಿಯ ನಾಗರಿಕರು ಭಾಗವಹಿಸಿದ್ದರು.



