ಬೆಂಗಳೂರು: 2023ರಲ್ಲಿ ಅಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40% ಕಮಿಷನ್ ಮಾಡಿದ ಆರೋಪದಲ್ಲಿ ಇಂದು ಕೋರ್ಟ್ಗೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಂ4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ. ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್ಗೆ ಹಾಜರಾಗಿದ್ದಾರೆ.
ವಿಧಾನ ಪರಿಷತ್ ಸದಸ್ಯ ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ವಿಚಾರಣೆಗೆ ಬಂದಿದ್ದು, ಇಂದು ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರಾದರು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆರೋಪಿಸಿದ್ದ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿತ್ತು.
2,500 ಕೋಟಿ ರೂಪಾಯಿ ಬಿಜೆಪಿ ಹೈಕಮಾಂಡ್ಗೆ ಕೊಟ್ಟರೆ ಸಿಎಂ ಹುದ್ದೆ ಸಿಗುತ್ತದೆ” ಎಂದಿದ್ದ ಆರೋಪ, ಕೋವಿಡ್ ಕಿಟ್ ಖರೀದಿ ಹಗರಣ, 40% ಕಮಿಷನ್ ಆರೋಪಗಳನ್ನು ಮಾಡಿದ್ದ ಕೈ ನಾಯಕರ ಮೇಲೆ ಕೇಶವ ಪ್ರಸಾದ್ ಮಾನನಷ್ಟ ಮೊಕದ್ದಮೆ ಹಾಕಿದ್ದರು. 08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರ ದಾಖಲು ಮಾಡಿದ್ದರು. ಈ ಪ್ರಕರಣದ ಕುರಿತು ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ.