ನೆಲಮಂಗಲ: ಜಿಲ್ಲಾಮಟ್ಟದ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ಒಟ್ಟು 70 ವಿದ್ಯಾರ್ಥಿ ಕ್ರೀಡಾಪಟುಗಳು ವಿವಿಧ ತಾಲೂಕುಗಳಿಂದ ಭಾಗವಹಿಸಿದ್ದು 45 ಜನ ಚಿನ್ನದ ಪದಕವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಇಂಟರ್ನ್ಯಾಷನಲ್ ಪ್ಲೇಯರ್ ಹಾಗೂ 37ನೇ ನ್ಯಾಷನಲ್ ಗೇಮ್ಸ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ ಜಗದೀಶ್ ಎಸ್ ಪಿ ರವರು ತಿಳಿಸಿದರು.
ನಗರದ ಪವಾಡ ಶ್ರೀ ಬಸವಣ್ಣ ದೇವರ ಮಠದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೆಂಕಾಕ್ ಸಿಲತ್ ಸಂಸ್ಥೆಯ ವತಿಯಿಂದ ಆಯೋಜಿಸಿದ 2024-25ರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.ಈ ಕ್ರೀಡಾಕೂಟದಿಂದ ಬಹಳಷ್ಟು ಮಕ್ಕಳು ಭವಿಷ್ಯದಲ್ಲಿ ಉತ್ತಮ ಅವಕಾಶವನ್ನು ಗಳಿಸಬಲ್ಲರು ಹಾಗೂ ಪ್ರತಿ ವರ್ಷ ಕ್ರೀಡೆಯಿಂದ ಸುಮಾರು 4 ಲಕ್ಷಕ್ಕೂ ಅಧಿಕ ಜನ ಸರ್ಕಾರಿ ನೌಕರಿಯಲ್ಲಿ ಅವಕಾಶ ಬಿದ್ದಿಸುತ್ತಿರುವುದು ಸಂತಸದ ವಿಷಯ ಎಂದರು.
ಇಂಡಿಯನ್ ಅಕಾಡೆಮಿ ವಿದ್ಯಾ ಸಂಸ್ಥೆಯ ದೈಹಿಕ ನಿರ್ದೇಶಕರಾದ ರಘುಪತಿ ಕೆ ರವರು ಮಾತನಾಡಿ ಕ್ರೀಡೆಯನ್ನು ಜವಾಬ್ದಾರಿತವಾಗಿ ಆಡುವುದರೊಂದಿಗೆ ತಮ್ಮ ವ್ಯಕ್ತಿತ್ವ ವಿಕಸನದೊಂದಿಗೆ ಸಮಾಜದಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರಿಂದ ಜೊತೆಗೆ ನಮ್ಮ ಹೆಸರನ್ನು ಶಾಶ್ವತವಾಗಿ ನಿಲ್ಲಿಸುವಂತೆ ಮಾಡಬಹುದು ಎಂದು ಮಕ್ಕಳಿಗೆ ತಮ್ಮ ಮಾಹಿತಿಯನ್ನು ನೀಡಿ ಸಕ್ರಿಯವಾಗಿ ಭಾಗವಹಿಸಿ ಸೋಲು ಗೆಲುವು ಸಹಜ ಎದೆಗುಂದದೆ ತಮ್ಮ ಗುರಿಯನ್ನು ನಿರ್ಧರಿಸಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಮಕ್ಕಳನ್ನು ಉರಿದುಂಬಿಸಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪವಾಡ ಶ್ರೀ ಬಸವಣ್ಣ ದೇವರ ಮಠದ ಶ್ರೀ ಶ್ರೀ ಸಿದ್ದಲಿಂಗಮಹಾ ಸ್ವಾಮಿಗಳ ಆಶೀರ್ವಾದದೊಂದಿಗೆ ನೆರವೇರಿಸಿ ಘನ ಅಧ್ಯಕ್ಷತೆಯನ್ನು ಪ್ರಿಯದರ್ಶಿನಿ ವಿದ್ಯಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ. ಮಧುಸೂದನ್ ಎಸ್ ರವರು ವಹಿಸಿದ್ದರು. ಜೊತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೆಂಕಾಕ್ ಸಿಲತ್ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಕೆ ಪುಟ್ಟಶಾಮಯ್ಯ ನವರು ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚಂದ್ರಶೇಖರ್ ನಾಯಕ್ ಬಿಬಿಎಂಪಿ ಅಸಿಸ್ಟೆಂಟ್ ಇಂಜಿನಿಯರ್ ರವರು ವೇದಿಕೆಯನ್ನು ಹಂಚಿಕೊಂಡಿದ್ದರು. ಹಾಗೂ ಮಕ್ಕಳು ಕ್ರೀಡಾಕೂಟದಲ್ಲಿ ಸಂತೋಷದಿಂದ ಬಹಳ ಉತ್ಸಾಹದಿಂದ ಭಾಗವಹಿಸಿದ್ದು ಎದ್ದು ಕಾಣುತ್ತಿತ್ತು.