ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಹಳ್ಳಿಗಳಲ್ಲಿ ನೀರಿನ ಉಳಿತಾಯ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ 5 ಚೆಕ್ ಡ್ಯಾಂಗಳ ನಿರ್ಮಾಣದ ಕಾಮಗಾರಿಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಶಂಖುಸ್ಥಾಪನೆ ನೆರವೇರಿಸಿದರು.
ಸಣ್ಣ ನೀರಾವರಿ ಇಲಾಖೆ ವತಿಯಿಂದ ಬಿದಲೂರು ಗ್ರಾ.ಪಂ. ವ್ಯಾಪ್ತಿಯ ಮಾಳಿಗೇನಹಳ್ಳಿ – ಅತ್ತಿಬೆಲೆ ಬಳಿ ನಿರ್ಮಿಸಲಾಗುತ್ತಿರುವ ಚೆಕ್ ಡ್ಯಾಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅವರು ಮಾತನಾಡಿ 2 ಕೋಟಿ ವೆಚ್ಚದಲ್ಲಿ 5 ಚೆಕ್ ಡ್ಯಾಮ್ಗಳನ್ನು ಮಾಳಿಗೇನಹಳ್ಳಿ, ಮಾಯಸಂದ್ರ, ವೆಂಕಟೇನಹಳ್ಳಿ, ಬೆಟ್ಟಕೋಟೆ, ವಿಜಯಪುರ ಗ್ರಾಮಗಳ ಬಳಿ ನಿರ್ಮಾಣ ಮಾಡಲಾಗುತ್ತಿದ್ದು,
ಕೆರೆಗಳ ರೀತಿ ಚೆಕ್ ಡ್ಯಾಮ್ಗಳು, ಅಂತರ್ಜಲ ಮಟ್ಟವನ್ನು ಹೆಚ್ಚಿಸಲಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಕೊಳವೆ ಬಾವಿಗಳ ನೀರಿನ ಮಟ್ಟ ಹೆಚ್ಚಾಗಲಿದೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರು ದೊರಕಲಿದೆ, ಮಾಳಿಗೇನಹಳ್ಳಿ ಸುತ್ತ ಮುತ್ತಲ ಗ್ರಾಮಗಳ ರೈತರು, ಸಾರ್ವಜನಿಕರಿಗೆ ಅನುಕೂಲವಾಗಲಿದೆ, ನಿರ್ಮಾಣವಾಗುತ್ತಿರುವ ಚೆಕ್ ಡ್ಯಾಂಗಳ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರು ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವುದರೊಂದಿಗೆ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಜಗನ್ನಾಥ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಪ್ರ.ಕಾರ್ಯದರ್ಶಿ ನಾಗೇಗೌಡ, ಬಿದಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಎಸ್.ಪಿ. ಮುನಿರಾಜು, ಮಾಳಿಗೇನಹಳ್ಳಿ ಪ್ರಕಾಶ್, ಆವತಿ ಗ್ರಾ.ಪಂ ಅಧ್ಯಕ್ಷೆ ಮುನಿರತ್ನಮ್ಮ, ಸದಸ್ಯರಾದ ಅತ್ತಿಬೆಲೆ ನರಸಪ್ಪ, ಪುರಸಭಾ ಸದಸ್ಯ ವೇಣುಗೋಪಾಲ್, ಮುನಿಕೃಷ್ಣ, ಸಣ್ಣ ನೀರಾವರಿ ಇಂಜಿನಿಯರ್ ವಿಕಾಸ್, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.