This is the title of the web page
This is the title of the web page

ನಕಲಿ ಮದ್ಯಕ್ಕೆ 5 ಬಲಿ

ಪಾಟ್ನಾ: ಬಿಹಾರದಲ್ಲಿ ನಕಲಿ ಮದ್ಯದ ಹಾವಳಿ ಮತ್ತೆ ಶುರುವಾಗಿದೆ. ನಕಲಿ ಮದ್ಯವನ್ನು ಸೇವಿಸಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಮೋತಿಹಾರಿ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದಲ್ಲಿ ಈ ದುರಂತ ಸಂಭವಿದೆ. ನಕಲಿ ಮದ್ಯವನ್ನು ಗ್ರಾಮದ ಅನೇಕ ಜನ ಸೇವಿಸಿದ್ದಾರೆ. ಆ ಬಳಿಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು,

ಅಸ್ವಸ್ಥಗೊಂಡವರಲ್ಲಿ ಐವರು ಮೃತಪಟ್ಟಿದ್ದಾರೆ. ಇನ್ನೂ 12 ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.