ಲಕ್ನೋ: ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಇಂದು ಪೂರ್ವ ಸಿದ್ಧತೆಗಳನ್ನ ಪರಿಶೀಲಿಸಿದರು. ಬಳಿಕ ಮಾತನಾಡಿ, ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವುದಾಗಿ ತಿಳಿಸಿದರು. ನಂತರ ಯೋಗ ದಿನಾಚರಣೆ ಕುರಿತು ಮಾತನಾಡಿ, ರಾಜ್ಯದ ಎಲ್ಲಾ 57,000 ಗ್ರಾಮ ಪಂಚಾಯಿತಿಗಳು ಹಾಗೂ 762 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಬಾರಿ ಯೋಗ ದಿನವನ್ನು `ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ’ ಎಂಬ ವಸ್ತುವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ.



