ಸಿಎಂ ಡಿ .ಕೆ. ಶಿವಕುಮಾರ್ ಅವರು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಪ್ರಯುಕ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿ, ಮಾತನಾಡಿದರು. ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಶಿರಾ ಸ್ಫಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಸಚಿವರಾದ ಕೆ ಎಚ್ ಮುನಿಯಪ್ಪ, ಕೃಷ್ಣ ಬೈರೇಗೌಡ, ಶಾಸಕ ಪ್ರದೀಪ್ ಈಶ್ವರ್, ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ಹರಿಮರಾನ್ ಮತ್ತಿತರರು ಉಪಸ್ಥಿತರಿದ್ದರು.



