ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಇಂದು ಆರಂಭವಾಡಿದ್ದು, 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
5ನೇ ಹಂತದಲ್ಲಿ ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7, ಒಡಿಶಾದ 5, ಬಿಹಾರದ 5, ಜಾರ್ಖಂಡ್ನ 3, ಜಮ್ಮು ಮತ್ತು ಕಾಶ್ಮೀರದ ಒಂದು ಮತ್ತು ಲಡಾಖ್ನ ಒಂದು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.ಈ ಹಂತದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ರಾಹುಲ್ ಗಾಂಧಿ, ಚಿರಾಗ್ ಪಾಸ್ವಾನ್, ರಾಜೀವ್ ಪ್ರತಾಪ್ ರೂಡಿ, ರೋಹಿಣಿ ಆಚಾರ್ಯ, ಒಮರ್ ಅಬ್ದುಲ್ಲಾ ಮತ್ತು ಪಿಯೂಷ್ ಗೋಯಲ್ ಅವರಂತಹ ಹಿರಿಯ ನಾಯಕರನ್ನು ಒಳಗೊಂಡಿದ್ದು, ಅವರ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಈ ಹಂತದಲ್ಲಿ 8.95 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದಕ್ಕಾಗಿ ಒಟ್ಟು 94372 ಮತಗಟ್ಟೆಗಳನ್ನು ರಚಿಸಲಾಗಿದ್ದು, ಇದರಲ್ಲಿ 9.47 ಲಕ್ಷ ಮತಗಟ್ಟೆ ಅಧಿಕಾರಿಗಳು ಮತದಾನ ಪ್ರಕ್ರಿಯೆ ನಡೆಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತ ಚಲಾಯಿಸಲಿದ್ದಾರೆ.