ಗುಂಡ್ಲುಪೇಟೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಧರಣಿ 6ನೇ ದಿನಕ್ಕೆ ಕಾಲಿಟ್ಟಿದೆ.ಪಟ್ಟಣದ ತಾಲೂಕು ಕಚೇರಿ ಮುಂಬಾಗ ಕಳೆದ ಐದು ದಿನಗಳಿಂದಗ್ರಾಮ ಆಡಳಿತಾಧಿಕಾರಿಗಳು ಧರಣಿ ನಡೆಸುತ್ತಿದ್ದು ನಮ್ಮ ಬೇಡಿಕೆಗಳನ್ನು ಈಡೇರಿಸುವತನಕ ಧರಣಿ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ನಮ್ಮ ಕರ್ತವ್ಯ ನಿರ್ವಹಣೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಮೊಬೈಲ್ ಯಾಪ್ ಮತ್ತು ವೆಬ್ ಅಪ್ಲಿಕೇಶನ್ ಗಳ ನಿರ್ವಹಣೆಗೆ ಲ್ಯಾಪ್.ಟಾಪ್. ಮತ್ತು ಪ್ರಿಂಟರ್ ಇಂಟರ್ನೆಟ್. ಸ್ಕ್ಯಾನರ್ ಸೇರಿದಂತೆ ಅಗತ್ಯ ಪರಿಕರಗಳನ್ನು ಒದಗಿಸಬೇಕು ಕಚೇರಿಗಳ ವ್ಯವಸ್ಥೆಯನ್ನು ಸುಧಾರಿಸಬೇಕು.. ಗ್ರಾಮ ಆಡಳಿತ ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ನಿರ್ದಿಷ್ಟ ಮುಷ್ಕರವನ್ನು ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಮಹದೇವಪ್ಪ. ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ.ಉಪಾಧ್ಯಕ್ಷೆ ಅನಿತಾ. ಪ್ರಧಾನ ಕಾರ್ಯದರ್ಶಿ.ನದೀಮ್ ಹುಸೇನ್. ದ್ರಾಕ್ಷಾಯಿಣಿ ಮನೋಹರ. ಅನಿತಾ ರಾಣಿ. ಸೇರಿದಂತೆ ಹಲವು ಮಂದಿ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.