ಕೋಡಾಡ: ನಿಂತಿದ್ದ ಟ್ರಕ್ಗೆಕಾರು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿರುವ ಘಟನೆ ತೆಲಂಗಾಣ ರಾಜಧಾನಿ ಕೋಡಾಡಾ ಪಟ್ಟಣದ ಬಳಿ ಈ ಘಟನೆ ನಡೆದಿದೆ.ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ದುರಸ್ತಿಗಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ಗೆ ಹತ್ತು ಜನರೊಂದಿಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಅತಿ ವೇಗದಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದಿದ್ದರಿಂದ ಎಲ್ಲಾ ಆರು ಪ್ರಯಾಣಿಕರು (ನಾಲ್ವರು ಪುರುಷರು, ಒಬ್ಬ ಮಹಿಳೆ ಮತ್ತು ಒಂದು ಹೆಣ್ಣು
ಮಗು) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ನಡೆದಾಗ ಅವರು ಹೈದರಾಬಾದ್ ನಿಂದ ವಿಜಯವಾಡಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.