ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪದ ಅರಬೈಲ್ ಘಾಟ್ ಬಳಗಾರ್ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕ್ರೂಸರ್ ವಾಹನ ಮತ್ತು ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿ ಸಂಭವಿಸಿ 7 ಜನ ಸಾವನ್ನಪ್ಪಿದ್ದಾರೆ.
ಯಲ್ಲಾಪುರ ಬಳಿಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಹಾಗೂ ಕ್ರೂಸರ್ ವಾಹನ ಪರಸ್ಪರ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣವಾಗಿ ಜಖಂಗೊAಡಿದ್ದು, 6 ಮಂದಿ ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರು ಧಾರವಾಡ ಮೂಲದವರು ಎಂದು ಗುರುತಿಸಲಾಗಿದೆ. ಕ್ರೂಸರ್ ಚಾಲಕ ಸಂಜೀವ (33), ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ್ (26), ಅಭಿಷೇಕ್ (26) ಮೃತಪಟ್ಟವರು.
ಭೀಕರ ರಸ್ತೆ ಅಪಘಾತ 6 ಮಂದಿ ದುರ್ಮರಣ



