ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. ೬೨.೫೨ ಕೋಟಿ ಅಂದಾಜು ಮೌಲ್ಯದ ಒಟ್ಟು ೧೪ ಎಕರೆ ೦.೧೦ ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ. ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸ್ಮಶಾನ, ಸರ್ಕಾರಿ ಕೆರೆ, ಸರ್ಕಾರಿ ಜಾಗ, ಖರಾಬು ತೋಪು ಹಾಗೂ ಸರ್ಕಾರಿ ಕಟ್ಟೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಬೆAಗಳೂರು ಪೂರ್ವ ತಾಲ್ಲೂಕಿನ ವರ್ತೂರು ಹೋಬಳಿಯ ದೊಡ್ಡನೆಕ್ಕುಂದಿ ಗ್ರಾಮದ ಸ.ನಂ ೧೯೭ ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೦೫ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೪.೦೦ ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಭೋಗನಹಳ್ಳಿ ಗ್ರಾಮದ ಸ.ನಂ ೩೩ ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೦೫ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೧.೫೦ ಕೋಟಿಗಳಾಗಿರುತ್ತದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ತಟಗುಪ್ಪೆ ಗ್ರಾಮದ ಸ.ನಂ ೭೯ ರ ಸರ್ಕಾರಿ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೨೦ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೧.೫೦ ಕೋಟಿಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ಹುಲುವೇನಹಳ್ಳಿ ಗ್ರಾಮದ ಸ.ನಂ ೮/೧ಬಿ ರ ಸರ್ಕಾರಿ ಜಾಗ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೦೭ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೦.೧೯ ಲಕ್ಷಗಳಾಗಿರುತ್ತದೆ. ಬೇಗೂರು ಹೋಬಳಿಯ ಸಿಂಗಸAದ್ರ ಗ್ರಾಮದ ಸ.ನಂ ೧೦೦ ರ ಸರ್ಕಾರಿ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೧೭ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೧೭.೦೦ ಕೋಟಿಗಳಾಗಿರುತ್ತದೆ.
ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಇಟ್ಟಗಲಾಪುರ ಗ್ರಾಮದ ಸ.ನಂ ೩೮ ರ ಸರ್ಕಾರಿ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೧೦ ಎಕರೆ ೦.೦೯ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೩೦.೭೫ ಕೋಟಿಗಳಾಗಿರುತ್ತದೆ. ಹೆಸರಘಟ್ಟ ಹೋಬಳಿಯ ಕಾಕೋಳು ಗ್ರಾಮದ ಸ.ನಂ ೪೪ ರ ಸರ್ಕಾರಿ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೨ ಎಕರೆ ೦.೦೫ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೬.೩೮ ಕೋಟಿಗಳಾಗಿರುತ್ತದೆ. ಜಾಲ ಹೋಬಳಿಯ ಬಾಗಲೂರು ಗ್ರಾಮದ ಸ.ನಂ ೩೧೧ ರ ಖರಾಬು ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೨೦ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೧.೦೦ ಕೋಟಿಗಳಾಗಿರುತ್ತದೆ.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ವಡೇರಹಳ್ಳಿ ಗ್ರಾಮದ ಸ.ನಂ ೧೨ ರ ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೦೨ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ ೦.೨೦ ಲಕ್ಷಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಬೆಂಗಳೂರು ನಗರದ ವಿವಿಧ ತಾಲ್ಲೂಕಿನ ತಹಶೀಲ್ದಾರ್ ರವರು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು.
೬೨.೫೨ ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ



