ಶಿವರಾಜ್ ಕುಮಾರ್ ಹಾಗೂ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಚಿತ್ರಕ್ಕೆ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ. `೬೬೬ ಆಪರೇಷನ್ ಡ್ರೀಮ್ ಥಿಯೇಟರ್’ ನ ಭಾಗವಾಗುವ ಮೂಲಕ ಕನಸು ನನಸಾಗಿದೆ. ಶಿವಣ್ಣ ಹಾಗೂ ಧನಂಜಯ ಅವರೊಂದಿಗೆ ಕೆಲಸ ಮಾಡುವುದು ಖುಷಿ ವಿಷಯ.. ಎಂದಿದ್ದಾರೆ. ಡಾ. ವೈಶಾಕ್ ಜೆ ಗೌಡ ನಿರ್ಮಿಸಲಾಗುತ್ತಿರುವ ಚಿತ್ರಕ್ಕೆ ಹೇಮಂತ್ ಎಂ ರಾವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಎರಡು ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಡಿಸೆಂಬರ್ ಮೊದಲ ವಾರದಲ್ಲಿ ಮೂರನೇ ಹಂತದ ಶೂಟಿಂಗ್ ನಡೆಸಲು ಯೋಜನೆ ಹಾಕಿಕೊಂಡಿದೆ. ಚರಣ್ ರಾಜ್ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಕ್ಯಾಮೆರಾ ವರ್ಕ್ ಇವೆ.



