ಬೆಂಗಳೂರು : ಬೆಂಗಳೂರು ನಗರದಲ್ಲಿ ಏಳು ಕೋಟಿ ನಗದುದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬಆರೋಪಿಯನ್ನು ಬಂಧಿಸಿದ್ದಾರೆ. ಸಿಎಂಎಸ್ ಮಾಜಿ ನೌಕರ ಝೆವಿಯರ್ ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ ೫ ಕೋಟಿ ೩೦ ಲಕ್ಷ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್ ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಇನ್ನು ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಇವರ ಹುಡುಕಾಟಕ್ಕೆ ಶೋಧಕಾರ್ಯ ಮುಂದುವರಿದಿದೆ.



